2020ರ ಅಕ್ಟೋಬರ್ 18ರಂದು ಶೇಷಾದ್ರಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಕಿಯೊಬ್ಬಳು ಗ್ರಂಥಾಲಯಕ್ಕೆ ಹೋಗಿ ಬರುವುದಾಗಿ ಪೋಷಕರಿಗೆ ತಿಳಿಸಿ ಮನೆಯಿಂದ ಹೋಗಿದ್ದಳು. ನಂತರ, ಮನೆಗೆ ವಾಪಸ್ ಆಗಿರಲಿಲ್ಲ. ಶೇಷಾದ್ರಿಪುರ ಠಾಣೆಯಲ್ಲಿ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಆರೋಪಿಯು, ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದು ದೃಢ ಪಟ್ಟಿತ್ತು. ಆರೋಪಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು.