ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ ಶಿಕ್ಷೆ

Published 10 ಜುಲೈ 2024, 16:13 IST
Last Updated 10 ಜುಲೈ 2024, 16:13 IST
ಅಕ್ಷರ ಗಾತ್ರ

ಬೆಂಗಳೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 1ನೇ ತ್ವರಿತ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

ಲಗ್ಗೆರೆಯ ಚೇತನ್‌ ಶಿಕ್ಷೆಗೆ ಒಳಗಾದ ಅಪರಾಧಿ.

ಮೂರು ವರ್ಷದ ಮಗುವಿನ ಮೇಲೆ ಚೇತನ್‌ ಲೈಂಗಿಕ ದೌರ್ಜನ್ಯ ಎಸಗಿದ್ದ. ಮಗುವಿನ ತಂದೆ ನೀಡಿದ್ದ ದೂರು ಆಧರಿಸಿ ಅಪರಾಧಿಯನ್ನು 2022ರ ಜುಲೈ 7ರಂದು ಬಂಧಿಸಲಾಗಿತ್ತು. ಪ್ರಕರಣದಲ್ಲಿ 15 ಮಂದಿ ಸಾಕ್ಷಿದಾರರನ್ನು ವಿಚಾರಣೆ ನಡೆಸಿದ್ದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದಲ್ಲಿ ವಾದ–ಪ್ರತಿವಾದ ಆಲಿಸಿದ ನ್ಯಾಯಾಧೀಶೆ ಕೆ.ಎನ್‌.ರೂಪಾ ಅವರು ಶಿಕ್ಷೆ ನೀಡಿ ಆದೇಶಿಸಿದ್ದಾರೆ. ಸರ್ಕಾರಿ ವಕೀಲರಾಗಿ ಪಿ.ಕೃಷ್ಣವೇಣಿ ಅವರು ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT