ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಲಕಿಗೆ ಲೈಂಗಿಕ ದೌರ್ಜನ್ಯ: ಶಿಕ್ಷಕಿ ವಿರುದ್ಧ ಪೋಕ್ಸೊ ಪ್ರಕರಣ

Published 5 ಜುಲೈ 2024, 15:47 IST
Last Updated 5 ಜುಲೈ 2024, 15:47 IST
ಅಕ್ಷರ ಗಾತ್ರ

ಬೆಂಗಳೂರು: ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಅಡಿ ನರ್ಸರಿ ಶಾಲೆಯ 50 ವರ್ಷದ ಶಿಕ್ಷಕಿ ವಿರುದ್ಧ ಕೆ.ಜಿ.ಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ (ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪೋಷಕರು ನೀಡಿದ ದೂರು ಆಧರಿಸಿ ಕೆ.ಜಿ.ಹಳ್ಳಿ ವ್ಯಾಪ್ತಿಯಲ್ಲಿರುವ ಖಾಸಗಿ ಶಾಲೆಯ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಶಿಕ್ಷಕಿಯನ್ನು ವಿಚಾರಣೆ ನಡೆಸಿ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

‘ಜೂನ್‌ 6ರಂದು ಮಗಳನ್ನು ಖಾಸಗಿ ಶಾಲೆಗೆ ದಾಖಲು ಮಾಡಿದ್ದೆವು. 10 ದಿನ ಶಾಲೆಗೆ ತೆರಳಿದ್ದ ಪುತ್ರಿ ನಂತರ ಶಾಲೆಗೆ ತೆರಳುವುದಿಲ್ಲ ಎಂದು ಪಟ್ಟು ಹಿಡಿದಳು. ಆಕೆಯನ್ನು ವಿಚಾರಿಸಿದಾಗ, ಖಾಸಗಿ ಅಂಗಗಳಲ್ಲಿ ನೋವು ಆಗಿರುವ ಬಗ್ಗೆ ತಿಳಿಸಿದ್ದಳು. ‘ಮ್ಯಾಮ್‌’ ಖಾಸಗಿ ಅಂಗಗಳನ್ನು ಸ್ಪರ್ಶಿಸಿರುವ ಬಗ್ಗೆಯೂ ಮಾಹಿತಿ ನೀಡಿದ್ದಳು. ನಂತರ, ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು’ ಎಂದು ಪೋಷಕರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT