ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ: ಆರೋಪಿಗಳ ಬಂಧನಕ್ಕೆ ಆಗ್ರಹ

Published 3 ಮೇ 2024, 20:08 IST
Last Updated 3 ಮೇ 2024, 20:08 IST
ಅಕ್ಷರ ಗಾತ್ರ

ಬೆಂಗಳೂರು: ‘ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳಾದ ಶಾಸಕ ಎಚ್.ಡಿ. ರೇವಣ್ಣ ಹಾಗೂ ಅವರ ಮಗನಾದ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಕೂಡಲೇ ಬಂಧಿಸಬೇಕು. ಆರೋಪಿಗಳಿಗೆ ಜಾಮೀನು ಸಿಗದಂತೆ ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಬೇಕು’ ಎಂದು ಆಗ್ರಹಿಸಿ ‘ನಾವೆದ್ದು ನಿಲ್ಲದಿದ್ದರೆ‘ ಸಂಘಟನೆ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

‘ಆರೋಪಿ ಪ್ರಜ್ವಲ್‌ ರೇವಣ್ಣ ತಮ್ಮ ಅಧಿಕಾರ, ಕುಟುಂಬದ ಪ್ರಭಾವ ಮತ್ತು ಜಾತಿ ಬಳಸಿಕೊಂಡು ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಪ್ರಕರಣದ ತನಿಖೆ ಹಾಗೂ ಆರೋಪಿಗಳನ್ನು ಬಂಧಿಸುವ ಪ್ರಕ್ರಿಯೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಒಳಗಾಗಬಾರದು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

‘ಸಂತ್ರಸ್ತೆಯರ ಅಶ್ಲೀಲ ವಿಡಿಯೊ ಹಾಗೂ ಫೋಟೊಗಳನ್ನು ಪೆನ್‌ಡ್ರೈವ್‌ ಮೂಲಕ ಸಾರ್ವಜನಿಕರಿಗೆ ವಿತರಿಸಿ, ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡುತ್ತಿರುವವರನ್ನು ಪತ್ತೆಹಚ್ಚಿ, ಬಂಧಿಸಬೇಕು’ ಎಂದೂ ಪ್ರತಿಭಟನಕಾರರು ಒತ್ತಾಯಿಸಿದರು.

‘ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯರ ಗೌಪ್ಯ ಕಾಪಾಡುವ ಮೂಲಕ ಅವರಿಗೆ ಸೂಕ್ತ ರಕ್ಷಣೆ ನೀಡಬೇಕು. ಸಂತ್ರಸ್ತೆಯರಿಗೆ ಪ್ರತ್ಯೇಕ ಕೌನ್ಸೆಲಿಂಗ್‌ ಕೇಂದ್ರಗಳನ್ನು ತೆರೆಯಬೇಕು. ಇವರಿಗೆ ದೂರು ದಾಖಲಿಸಲು ಸಾಧ್ಯವಾಗುವಂತೆ ಹಾಸನ ಮತ್ತು ಬೆಂಗಳೂರಿನಲ್ಲಿ ಪ್ರತ್ಯೇಕ ದೂರು ಕೇಂದ್ರಗಳನ್ನು ಸ್ಥಾಪಿಸಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT