ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯಗಳ ಜಾಗೃತಿ

Last Updated 30 ಜನವರಿ 2020, 1:43 IST
ಅಕ್ಷರ ಗಾತ್ರ

ಬೆಂಗಳೂರು: ‘ಹೆಣ್ಣುಮಕ್ಕಳು ಲೈಂಗಿಕ ದೌರ್ಜನ್ಯಗಳ ಬಗ್ಗೆ ಜಾಗೃತರಾಗಿರಬೇಕು.ವೈಯಕ್ತಿಕ ಸುರಕ್ಷತೆ, ಲೈಂಗಿಕ ಕಿರುಕುಳ ಹಾಗೂ ವಿವಿಧ ರೀತಿಯ ಸ್ಪರ್ಶಗಳ ಬಗ್ಗೆ ತಿಳಿದುಕೊಂಡು, ಅನ್ಯಾಯದ ವಿರುದ್ಧ ದನಿ ಎತ್ತಬೇಕು’ ಎಂದು ಶಂಕರ ಕಣ್ಣಿನ ಆಸ್ಪತ್ರೆಯ ಗುಣಮಟ್ಟ ಮತ್ತು ಶಿಕ್ಷಣ ವಿಭಾಗದ ವೈದ್ಯಕೀಯ ಅಧ್ಯಕ್ಷ ಡಾ.ಕೌಶಿಕ್ ಮುರಳಿ ಹೇಳಿದರು.

ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಯಂಗ್‌ ಇಂಡಿಯನ್ಸ್‌ ಸಂಸ್ಥೆಯ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ‘ಉತ್ತಮ ಭವಿಷ್ಯಕ್ಕಾಗಿ ಹೆಣ್ಣುಮಕ್ಕಳ ಸಬಲೀಕರಣ’ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಕಾರ್ಯಾಗಾರದಲ್ಲಿ ಗ್ರಾಮೀಣ ಭಾಗದ 50ಕ್ಕೂ ಹೆಚ್ಚು ಅಂಗವಿಕಲ ಹೆಣ್ಣುಮಕ್ಕಳು ಭಾಗವಹಿಸಿದ್ದರು. ಸುರಕ್ಷಿತ ಮತ್ತು ಅಸುರಕ್ಷಿತ ಸ್ಪರ್ಶ, ಖಾಸಗಿ ಭಾಗಗಳ ಪರಿಕಲ್ಪನೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಹಾಗೂ ಸುರಕ್ಷತಾ ಕೌಶಲಗಳ ಬಗ್ಗೆ ವಿವರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT