ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಸಹಪಾಠಿಗೆ ಲೈಂಗಿಕ ಕಿರುಕುಳ: ವ್ಯಕ್ತಿಯ ಬಂಧನ

ಹುಡುಗಿ ಹೆಸರಿನಲ್ಲಿ ಖಾತೆ ತೆರೆದು ಕೃತ್ಯ
Last Updated 20 ಸೆಪ್ಟೆಂಬರ್ 2019, 20:16 IST
ಅಕ್ಷರ ಗಾತ್ರ

ಬೆಂಗಳೂರು: ಎಸ್ಸೆಸ್ಸೆಲ್ಸಿಯಲ್ಲಿ ಸಹಪಾಠಿಯಾಗಿದ್ದ ಯುವತಿಗೆ ಅಶ್ಲೀಲ ಸಂದೇಶ ಹಾಗೂ ಫೋಟೊ ಕಳುಹಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಎಚ್‌.ಎಸ್. ಪ್ರಶಾಂತ್ (26) ಎಂಬಾತನನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

‘ಹೆಬ್ಬಗೋಡಿಯ ತಿರುಪಾಳ್ಯದ ಪ್ರಶಾಂತ್, ಜನವರಿಯಿಂದಲೇ ಯುವತಿಗೆ ಕಿರುಕುಳ ನೀಡುತ್ತಿದ್ದ. ಆ ಸಂಬಂಧ ದಾಖಲಾಗಿದ್ದ ದೂರಿನನ್ವಯ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿ ಕೊಂಡ’ ಎಂದು ಪೊಲೀಸರು ಹೇಳಿದರು.

ಹುಡುಗಿ ಹೆಸರಿನಲ್ಲಿ ಖಾತೆ:‘ಕಲ್ಪನ ರುಕ್ಕು’ ಎಂಬ ಹೆಸರಿನಲ್ಲಿ ಫೇಸ್‌ ಬುಕ್‌ನಲ್ಲಿ ನಕಲಿ ಖಾತೆ ತೆರೆದಿದ್ದ ಆರೋಪಿ, ಅದರ ಮೂಲಕ ಯುವತಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದ. ಹುಡುಗಿ ಇರಬಹುದೆಂಬ ಕಾರಣಕ್ಕೆ ಯುವತಿ ರಿಕ್ವೆಸ್ಟ್ ಸ್ವೀಕ ರಿಸಿದ್ದರು’ ಎಂದರು.

‘ಯುವತಿ ಜೊತೆ ಚಾಟಿಂಗ್ ಮಾಡಲಾರಂಭಿಸಿದ್ದ ಆರೋಪಿ, ಅಶ್ಲೀಲ ಸಂಭಾಷಣೆ ಹಾಗೂ ಅಶ್ಲೀಲ ಫೋಟೊಗಳನ್ನು ಕಳುಹಿಸಲಾರಂಭಿಸಿದ್ದ. ತನ್ನ ಜೊತೆ ಲೈಂಗಿಕವಾಗಿ ಸಹಕರಿಸಲು ಒತ್ತಾಯಿಸಲಾರಂಭಿಸಿದ್ದ. ಎಸ್ಸೆಸ್ಸೆಲ್ಸಿಯಿಂದಲೇ ಯುವತಿ ಜೊತೆ ಸಲುಗೆ ಬೆಳೆಸಲು ಆರೋಪಿ ಯತ್ನಿ ಸುತ್ತಿದ್ದ. ಆತನಿಗೆ ಯುವತಿ ಎಚ್ಚರಿಕೆ ನೀಡಿದ್ದಳು’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT