ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ದೈಹಿಕ ಶಿಕ್ಷಣ ಶಿಕ್ಷಕನ ಬಂಧನ

Last Updated 12 ನವೆಂಬರ್ 2022, 19:45 IST
ಅಕ್ಷರ ಗಾತ್ರ

ಬೆಂಗಳೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ದೈಹಿಕ ಶಿಕ್ಷಣ ಶಿಕ್ಷಕ ಅಂಜನಪ್ಪ (55) ಎಂಬಾತನನ್ನುಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಸುಮಾರು 14 ವಿದ್ಯಾರ್ಥಿನಿಯರಿಗೆ ಈತ ಲೈಂಗಿಕ ಕಿರುಕುಳ ನೀಡಿದ್ದು ತನಿಖೆಯಿಂದ ಗೊತ್ತಾಗಿದೆ.ವಿದ್ಯಾರ್ಥಿನಿಯರ ಮಾಹಿತಿ ಆಧರಿಸಿ ಮುಖ್ಯ ಶಿಕ್ಷಕರೇ ದೂರು ನೀಡಿದ್ದರು. ತಿಂಗಳ ಹಿಂದಷ್ಟೇ ಈತ ಶಾಲೆಗೆ ವರ್ಗಾವಣೆಗೊಂಡಿದ್ದ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ಪೋಕ್ಸೊ ಕಾಯ್ದೆಯಡಿ ಅಡಿ ಪ್ರಕರಣ ದಾಖಲಿಸಿಕೊಂಡು ಶಿಕ್ಷಕನನ್ನು ಬಂಧಿಸಲಾಗಿತ್ತು. ತರಬೇತಿ ನೀಡುವ ನೆಪದಲ್ಲಿ ವಿದ್ಯಾರ್ಥಿನಿಯರ ಜೊತೆಗೆ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡುತ್ತಿದ್ದ ಎಂದು ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದರು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT