ಭಾನುವಾರ, ಏಪ್ರಿಲ್ 5, 2020
19 °C

ಲೈಂಗಿಕ ದೌರ್ಜನ್ಯ ಉಬರ್ ಚಾಲಕ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕ್ಯಾಬ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬರ ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಉಬರ್ ಚಾಲಕ ನಾಗರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

‘ಮಹದೇವಪುರದಲ್ಲಿ ವಾಸವಿದ್ದ ಆರೋಪಿ ವಿರುದ್ಧ 25 ವರ್ಷದ ಸಂತ್ರಸ್ತೆ ದೂರು ನೀಡಿದ್ದರು. ಅದರನ್ವಯ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿತ್ತು’ ಎಂದು ಪೊಲೀಸರು ಹೇಳಿದರು.

‘ಹೊಸೂರು ರಸ್ತೆಯಲ್ಲಿ ವಾಸವಿರುವ ಯುವತಿ ಇದೇ 7ರಂದು ಸ್ನೇಹಿತರ ಮನೆಗೆ ಕ್ಯಾಬ್‌ನಲ್ಲಿ ಹೊರಟಿದ್ದರು. ಮಾರ್ಗಮಧ್ಯೆಯೇ ಕ್ಯಾಬ್ ನಿಲ್ಲಿಸಿದ್ದ ಆರೋಪಿ, ಯುವತಿಯ ಅಂಗಾಂಗಗಳನ್ನು ಮುಟ್ಟಿ ಅನುಚಿತವಾಗಿ ವರ್ತಿಸಿದ್ದ. ಯುವತಿ ಸಹಾಯಕ್ಕಾಗಿ ಕಿರುಚಾಡುತ್ತಿದ್ದಂತೆ ನಿಗದಿತ ಸ್ಥಳದಿಂದ 100 ಮೀಟರ್ ದೂರದಲ್ಲಿ ಇಳಿಸಿ ಪರಾರಿಯಾಗಿದ್ದ’ ಎಂದರು.

‘ಕೃತ್ಯದ ಬಳಿಕ ಆರೋಪಿ ತಲೆಮರೆಸಿಕೊಂಡು ಓಡಾಡುತ್ತಿದ್ದ. ಮೊಬೈಲ್ ಲೋಕೇಶನ್ ನೀಡಿದ ಸುಳಿವು ಆಧರಿಸಿ ಆತನನ್ನು ಸೆರೆ ಹಿಡಿಯಲಾಯಿತು’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು