ಪೀಣ್ಯ ದಾಸರಹಳ್ಳಿ: ಮನೆ ಸಾಮಗ್ರಿ ತರಲು ದಿನಸಿ ಅಂಗಡಿಗೆ ಹೋಗಿದ್ದ ಏಳು ವರ್ಷದ ಬಾಲಕಿಗೆ ಚಾಕೊಲೇಟ್ ನೀಡುವ ಆಸೆ ತೋರಿಸಿ, ಗೋದಾಮಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಬಾಗಲಗುಂಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಕೇರಳದ ಮೊಹಮ್ಮದ್ ಹಾಜಿ (20) ಬಂಧಿತ ಆರೋಪಿ.

ದಾಸರಹಳ್ಳಿಯ ಮಹೇಶ್ವರಮ್ಮ ದೇವಸ್ಥಾನದ ಬಳಿಯ ಅಂಗಡಿಯೊಂದಕ್ಕೆ ಬಾಲಕಿ ಗುರುವಾರ ರಾತ್ರಿ ತೆರಳಿದ್ದಳು. ಆಗ ಆರೋಪಿ ಚಾಕೊಲೇಟ್ ಆಸೆ ತೋರಿಸಿ ಗೋದಾಮಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

‘ಆರೋಪಿಯ ವಿರುದ್ಧ ಪೋಕ್ಸೊ(ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ) ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು. ಒಂದು ವೇಳೆ ಯಾರದ್ದೋ ಪ್ರಭಾವಕ್ಕೆ ಒಳಗಾಗಿ ಈ ಘಟನೆಯನ್ನು ಮುಚ್ಚಿಹಾಕುವ ಪ್ರಯತ್ನ ನಡೆಸಿದರೆ ತೀವ್ರ ಹೋರಾಟ ನಡೆಸುತ್ತೇವೆ’ ಎಂದು ಸ್ಥಳೀಯ ನಿವಾಸಿ ಅಮರನಾಥ್ ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.