ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಕಾಂಗ್ರೆಸ್ ಮುಖಂಡ ಗುರಪ್ಪ ನಾಯ್ಡು ಅವರಿಗೆ ವಿಚಾರಣೆಗೆ ಹಾಜರಾಗುವಂತೆ ವಿ.ವಿ ಪುರ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ

ಆರೋಪಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದ್ದು, ಆರೋಪಿಯ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಗುರಪ್ಪ ನಾಯ್ಡು ವಿರುದ್ಧ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣದ ತನಿಖೆ ಹೊಣೆಯನ್ನು ಸಂತ್ರಸ್ತೆಯ ಮನವಿ ಮೇರೆಗೆ ವಿ.ವಿ.ಪುರ ಠಾಣೆಗೆ ವರ್ಗಾವಣೆಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಕಡತವನ್ನು ವಿ.ವಿ.ಪುರ ಠಾಣೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ರಾಜಕೀಯವಾಗಿ ಫ್ರಭಾವಿಯಾಗಿರುವ ಗುರಪ್ಪ ನಾಯ್ಡು ಅವರು ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದಾರೆ. ಅವರ ಶಾಲೆ ಸಹ ಅದೇ ಠಾಣೆ ವ್ಯಾಪ್ತಿಯಲ್ಲಿದೆ. ತನಿಖೆ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂಬ ಕಾರಣಕ್ಕೆ ಪ್ರಕರಣವನ್ನು ಬೇರೆ ಠಾಣೆಗೆ ವರ್ಗಾಯಿಸಬೇಕು ಎಂದು ದಕ್ಷಿಣ ವಿಭಾಗದ ಡಿಸಿಪಿಗೆ ಸಂತ್ರಸ್ತೆ ಮನವಿ ಮಾಡಿದ್ದರು.

ಗುರುಪ್ಪ ನಾಯ್ಡು ವಿರುದ್ಧ ಅವರ ಶಾಲೆಯಲ್ಲಿಯೇ ಈ ಹಿಂದೆ ಕೆಲಸ ಮಾಡುತ್ತಿದ್ದ ಶಿಕ್ಷಕಿಯು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು. ತನ್ನನ್ನೂ ಸೇರಿ ಶಾಲೆಯಲ್ಲಿ ಕೆಲಸ ಮಾಡುವ ಹಲವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.