ಶನಿವಾರ, ಫೆಬ್ರವರಿ 22, 2020
19 °C

ಕಳ್ಳನಿಂದ ಬಾಲಕಿಗೆ ಲೈಂಗಿಕ ದೌರ್ಜನ್ಯ: ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶೌಚಾಲಯದ ಕಿಟಕಿ ಮೂಲಕ ಮನೆಯೊಳಗೆ ನುಗ್ಗಿದ್ದ ಕಳ್ಳನೊಬ್ಬ ಕೊಠಡಿಯಲ್ಲಿ ಮಲಗಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಶನಿವಾರ ನಡೆದಿರುವ ಘಟನೆ ಸಂಬಂಧ 9 ವರ್ಷದ ಬಾಲಕಿಯ ಪೋಷಕರು ದೂರು ನೀಡಿದ್ದಾರೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಬಾಲಕಿಯು ಪೋಷಕರ ಜೊತೆ ಅಪಾರ್ಟ್‌ಮೆಂಟ್ ಸಮುಚ್ಚಯವೊಂದರಲ್ಲಿ ನೆಲೆಸಿದ್ದಾಳೆ. ಶನಿವಾರ ನಸುಕಿನಲ್ಲಿ ಎಲ್ಲರೂ ಗಾಢ ನಿದ್ದೆಯಲ್ಲಿದ್ದರು. ಬಾಲಕಿ ಪ್ರತ್ಯೇಕ ಕೊಠಡಿಯಲ್ಲಿ ಮಲಗಿದ್ದಳು’

‘ಶೌಚಾಲಯದ ಕಿಟಕಿ ಮೂಲಕ ಮನೆಯೊಳಗೆ ನುಗ್ಗಿದ್ದ ಆರೋಪಿ, ಚಿನ್ನಾಭರಣ ಹಾಗೂ ನಗದಿಗಾಗಿ ಮನೆಯಲ್ಲೆಲ್ಲ ಹುಡುಕಾಟ ನಡೆಸಿದ್ದ. ಬಟ್ಟೆಗಳನ್ನು ಚಿಲ್ಲಾಪಿಲ್ಲಿಯಾಗಿ ಮಾಡಿದ್ದ. ಕೊನೆಯಲ್ಲಿ ಬಾಲಕಿಯ ಕೊಠಡಿಗೆ ಹೋಗಿದ್ದ. ಆಕೆಯ ಪಕ್ಕವೇ ಮಲಗಿಕೊಂಡು ಬಟ್ಟೆ ಬಿಚ್ಚಲು ಯತ್ನಿಸುತ್ತಲೇ ಲೈಂಗಿಕ ದೌರ್ಜನ್ಯ ಎಸಗಿದ್ದ. ಎಚ್ಚರಗೊಂಡಿದ್ದ ಬಾಲಕಿ ಆರೋಪಿಯನ್ನು ಕಂಡು ಚೀರಾಡಿದ್ದಳು. ಕೂಡಲೇ ಆರೋಪಿ ಅಲ್ಲಿಂದ ಓಡಿಹೋಗಿದ್ದಾನೆ’ ಎಂದು ಪೊಲೀಸರು ತಿಳಿಸಿದರು.   

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು