ಸೋಮವಾರ, ಸೆಪ್ಟೆಂಬರ್ 26, 2022
20 °C

ಉದ್ಯಮದ ಬಗ್ಗೆ ಮಾತುಕತೆಗೆಂದು ಕರೆದು ಯುವತಿ ಮೇಲೆ ಲೈಂಗಿಕ ದೌರ್ಜನ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉದ್ಯಮದ ಬಗ್ಗೆ ಮಾತುಕತೆಗೆಂದು ಯುವತಿಯೊಬ್ಬರನ್ನು ಹೋಟೆಲ್‌ಗೆ ಕರೆಸಿ ಲೈಂಗಿಕ ದೌರ್ಜನ್ಯ ಎಸಗಲಾಗಿದ್ದು, ಈ ಬಗ್ಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ನಗರದ ನಿವಾಸಿಯಾಗಿರುವ ಯುವತಿ ದೂರು ನೀಡಿದ್ದಾರೆ. ಲೈಂಗಿಕ ದೌರ್ಜನ್ಯ ಹಾಗೂ ಜೀವ ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತಮಿಳುನಾಡಿನ ನಿವಾಸಿಯಾಗಿರುವ ಆರೋಪಿ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದರು.

‘ಉದ್ಯಮಿ ಆಗಿರುವ ಆರೋಪಿ, ತಮಿಳುನಾಡಿನಿಂದ ಇತ್ತೀಚೆಗೆ ನಗರಕ್ಕೆ ಬಂದಿದ್ದ. ಸಂಬಂಧಿಕರೊಬ್ಬರ ಮೂಲಕ ಯುವತಿಯನ್ನು ಸಂಪರ್ಕಿಸಿದ್ದ ಈತ, ಉದ್ಯಮ ಅಭಿವೃದ್ಧಿ ಬಗ್ಗೆ ಮಾತನಾಡಬೇಕೆಂದು ಹೇಳಿ ಆಗಸ್ಟ್ 6ರಂದು ಹೋಟೆಲ್‌ಗೆ ಕರೆಸಿಕೊಂಡಿದ್ದ. ಇದೇ ವೇಳೆ ಯುವತಿ ಜೊತೆ ಅನುಚಿತವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ, ಜೀವ ಬೆದರಿಕೆಯೊಡ್ಡಿದ್ದ. ಆತನಿಂದ ತಪ್ಪಿಸಿಕೊಂಡಿದ್ದ ಯುವತಿ, ಸಂಬಂಧಿಕರಿಗೆ ವಿಷಯ ತಿಳಿಸಿದ್ದರು. ನಂತರವೇ ಠಾಣೆಗೆ ಬಂದು ದೂರು ನೀಡಿದ್ದಾರೆ’ ಎಂದೂ ಪೊಲೀಸರು ಮಾಹಿತಿ ನೀಡಿದರು.

ಇವುಗಳನ್ನೂ ಓದಿ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು