ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ದೌರ್ಜನ್ಯ: ಪಕ್ಕದ ಮನೆಯವನಿಗೆ ಜೈಲು

Published 4 ಏಪ್ರಿಲ್ 2024, 16:12 IST
Last Updated 4 ಏಪ್ರಿಲ್ 2024, 16:12 IST
ಅಕ್ಷರ ಗಾತ್ರ

ಬೆಂಗಳೂರು: ಎಂಟು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ₹ 10 ಸಾವಿರ ದಂಡ ವಿಧಿಸಿ ನಗರದ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯ (ಎಫ್‌ಟಿಎಸ್‌ಸಿ) ಆದೇಶ ಹೊರಡಿಸಿದೆ.

ನಂದಿನಿ ಲೇಔಟ್ ಠಾಣೆಯಲ್ಲಿ 2022ರಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಅಂದಿನ ಇನ್‌ಸ್ಪೆಕ್ಟರ್ ವೆಂಕಟೇಗೌಡ ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

‘ಸಂತ್ರಸ್ತ ಬಾಲಕಿ, ಪೋಷಕರ ಜೊತೆ ನೆಲೆಸಿದ್ದಳು. ಅವಳ ಪಕ್ಕದ ಮನೆಯಲ್ಲಿಯೇ ಅಪರಾಧಿ ವಾಸವಿದ್ದ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಪೋಷಕರು ದೂರು ನೀಡಿದ್ದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು’ ಎಂದು ಪೊಲೀಸರು ಹೇಳಿದರು.

‘ಪ್ರಕರಣ ಸಂಬಂಧ ಪುರಾವೆಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಪಬ್ಲಿಕ್ ಪ್ರಾಸಿಕ್ಯೂಟರ್ ಮಧುಮತಿ ವಾದ ಮಂಡಿಸಿದ್ದರು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT