ಬೆಂಗಳೂರು: ಯುವತಿಯರೊಂದಿಗೆ ಸಲುಗೆ ಬೆಳೆಸಿ ಬಳಿಕ ಮೊಬೈಲ್‌ನಲ್ಲಿ ಅವರ ಖಾಸಗಿ ದೃಶ್ಯಗಳನ್ನು ಸೆರೆಹಿಡಿದು ಹಣಕ್ಕಾಗಿ ಪೀಡಿಸುತ್ತಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘24 ವರ್ಷದ ಯುವತಿ ನೀಡಿದ ದೂರಿನ ಆಧಾರದಲ್ಲಿಬ್ಯಾಡರಹಳ್ಳಿಯ ರಾಕೇಶ್ (26) ಎಂಬಾತನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

‘ಸಂತ್ರಸ್ತ ಯುವತಿಯುಲಗ್ಗೆರೆಯಲ್ಲಿ ಫ್ಯಾನ್ಸಿ ಸ್ಟೋರ್ ನಡೆಸುತ್ತಿದ್ದರು. ಆಟೊ ಚಾಲಕನಾಗಿರುವ ಆರೋಪಿ ಯುವತಿಯನ್ನು ಪರಿಚಯಿಸಿಕೊಂಡಿದ್ದ. ಇಬ್ಬರ ನಡುವೆ ಸ್ನೇಹ ಬೆಳೆದು ಅದು ಪ್ರೀತಿಗೆ ತಿರುಗಿತ್ತು. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ, ತನ್ನ ತಂದೆ ತಾಯಿಯ ಪರಿಚಯ ಮಾಡಿಸುವುದಾಗಿ ಆಕೆಯನ್ನು ಕೆಂಪೇಗೌಡನಗರದಲ್ಲಿರುವ ತನ್ನ ಅಕ್ಕನ ಮನೆಗೆ ಕರೆದೊಯ್ದಿದ್ದ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು, ಖಾಸಗಿ ದೃಶ್ಯಗಳನ್ನು ಮೊಬೈಲ್‌ನಲ್ಲಿ ಚಿತ್ರಿಸಿಕೊಂಡಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಕೆಲ ದಿನಗಳ ಬಳಿಕ ತಾನು ಚಿತ್ರಿಸಿಕೊಂಡಿದ್ದ ದೃಶ್ಯವನ್ನು ಯುವತಿಗೆ ವಾಟ್ಸ್‌ಆ್ಯಪ್ ಮೂಲಕ ಕಳುಹಿಸಿದ್ದ ಆರೋಪಿ, ಹಣಕ್ಕೆ ಬೇಡಿಕೆ ಇಟ್ಟಿದ್ದ. ಹಣ ಕೊಡದಿದ್ದರೆ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿದ್ದ. ಇದರಿಂದ ಹೆದರಿದ್ದ ಯುವತಿಯು ₹2.75 ಲಕ್ಷ ಹಣ ನೀಡಿದ್ದರು. ಇಷ್ಟಕ್ಕೆ ಸುಮ್ಮನಾಗದ ಆತ ಮತ್ತೆ ಹಣಕ್ಕಾಗಿ ಪೀಡಿಸಲು ಆರಂಭಿಸಿದ್ದ. ಆತನ ಕಿರುಕುಳ ತಾಳಲಾರದೆ ಯುವತಿ ಠಾಣೆಗೆ ಬಂದು ದೂರು ನೀಡಿದ್ದರು’ ಎಂದು ವಿವರಿಸಿದ್ದಾರೆ.

‘ಆರೋಪಿಯು ಮತ್ತಷ್ಟು ಯುವತಿಯರಿಗೆ ಇದೇ ರೀತಿ ವಂಚನೆ ಮಾಡಿರುವುದಾಗಿ ಸಂತ್ರಸ್ತ ಯುವತಿ ದೂರಿನಲ್ಲಿ ವಿವರಿಸಿದ್ದಾರೆ. ಆತನ ವಿಚಾರಣೆ ನಡೆಯುತ್ತಿದೆ. ವಂಚನೆಗೊಳಗಾದವರು ಠಾಣೆಗೆ ಬಂದು ದೂರು ನೀಡಬಹುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್‌ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.