ನೆಲಮಂಗಲ: ಬೆಂಗಳೂರು ಉತ್ತರ ತಾಲ್ಲೂಕಿನ ಹಳ್ಳಿಯೊಂದರಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದ್ದು, ಆರೋಪಿ ಭಾರದ್ವಾಜ್ ಎಂಬಾತನ ವಿರುದ್ಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರದ್ವಾಜ್ ಹಾಗೂ ದೌರ್ಜನ್ಯಕ್ಕೆ ಒಳಗಾದ ಮಹಿಳೆ ಅಕ್ಕಪಕ್ಕದ ಮನೆಗಳಲ್ಲಿ ನೆಲಸಿದ್ದರು. ಭಾರದ್ವಾಜ್ ಮನೆಯಲ್ಲಿದ್ದ ಫ್ರಿಡ್ಜ್‌ನಲ್ಲಿ ಮಹಿಳೆ ಹಾಲಿನ ಪೊಟ್ಟಣ ಇಟ್ಟಿದ್ದರು. ಅದನ್ನು ತರಲು ಹೋದಾಗ ಕೈಹಿಡಿದು ಎಳೆದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಆರೋಪಿಸಿ ದೂರು ನೀಡಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.