ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಸ್ತು ತಜ್ಞೆ ಮೇಲೆ ಲೈಂಗಿಕ ದೌರ್ಜನ್ಯ: ದೂರು ದಾಖಲು

Last Updated 1 ಜುಲೈ 2019, 6:46 IST
ಅಕ್ಷರ ಗಾತ್ರ

ಬೆಂಗಳೂರು: ಜಾಲಹಳ್ಳಿ ಕುವೆಂಪು ವೃತ್ತ ಬಳಿಯ ಫುಟ್‌ಪಾತ್ ಮೇಲೆ ನಡೆದುಕೊಂಡು ಹೊರಟಿದ್ದ ವಾಸ್ತು ತಜ್ಞೆಯೊಬ್ಬರ ಮೇಲೆ ಅಪರಿಚಿತನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಆ ಸಂಬಂಧ ಓಡಿಶಾದ 23 ವರ್ಷದ ಯುವತಿ, ಜಾಲಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಪತ್ತೆಗಾಗಿ ಪೊಲೀಸರು, ಘಟನಾ ಸ್ಥಳದಲ್ಲಿರುವ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

‘ಎರಡು ವಾರಗಳ ಹಿಂದಷ್ಟೇ ನಗರಕ್ಕೆ ಬಂದಿರುವ ಯುವತಿ, ಕಾಕ್ಸ್‌ಟೌನ್‌ನಲ್ಲಿರುವ ಖಾಸಗಿ ಕಂಪನಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದಾರೆ. ಇದೇ 24ರಂದು ಕೆಲಸ ಮುಗಿಸಿ ಬಿಎಂಟಿಸಿ ಬಸ್ಸಿನಲ್ಲಿ ಬಂದು ಕುವೆಂಪು ವೃತ್ತದ ಬಳಿ ಇಳಿದಿದ್ದರು’ ಎಂದು ಪೊಲೀಸರು ಹೇಳಿದರು.

‘ಫುಟ್‌ಪಾತ್‌ನಲ್ಲಿ ನಡೆದುಕೊಂಡು ಮನೆಯತ್ತ ಹೊರಟಿದ್ದ ವೇಳೆಯಲ್ಲೇ, ಎದುರಿಗೆ ಬಂದಿದ್ದ ಅಪರಿಚಿತನೊಬ್ಬ
ಹೊಟ್ಟೆ ಹಾಗೂ ಎದೆ ಮುಟ್ಟಿ ಓಡಿಹೋಗಿದ್ದಾನೆ. ಆ ಬಗ್ಗೆ ಯುವತಿ ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT