ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಜ್ಜನಿಂದಲೇ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ

Published 27 ಜೂನ್ 2024, 19:51 IST
Last Updated 27 ಜೂನ್ 2024, 19:51 IST
ಅಕ್ಷರ ಗಾತ್ರ

ಬೆಂಗಳೂರು: ಆರು ವರ್ಷದ ಮೊಮ್ಮಗಳ ಮೇಲೆ ಆಕೆಯ ಅಜ್ಜನೇ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಹುಳಿಮಾವು ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಬಾಲಕಿಯ ತಾಯಿ ನೀಡಿದ ದೂರಿನ ಆಧಾರದಲ್ಲಿ ಹುಳಿಮಾವು ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿ ತಪ್ಪಿಸಿಕೊಳ್ಳಲು ಸಹಕಾರ ನೀಡಿದ ಆರೋಪದ ಮೇಲೆ ಬಾಲಕಿಯ ತಂದೆ ರಂಜಿತ್‌ ಕುಮಾರ್‌ (35) ಅವರನ್ನು ಬಂಧಿಸಲಾಗಿದೆ. ಆರೋಪಿ ಚಕ್ರವರ್ತಿ (60), ರಂಜಿತ್‌ ಕುಮಾರ್ ಅವರ ಅತ್ತೆ ವಿಜಯಮ್ಮ ಹಾಗೂ ಇಬ್ಬರು ಸಹೋದರರು ತಲೆಮರೆಸಿಕೊಂಡಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಬಾಲಕಿಯ ತಾಯಿ ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಘಟನೆ ಬಗ್ಗೆ ಯಾರಿಗೂ ಹೇಳದಂತೆ ಬಾಲಕಿಯ ತಾಯಿಗೆ ಚಿನ್ನದ ಒಡವೆ, ಬಾಲಕಿಯ ಹೆಸರಿನಲ್ಲಿ ಮನೆ ನೀಡುವುದಾಗಿ ಆಮಿಷ ಒಡ್ಡಲಾಗಿತ್ತು. ಆದರೆ, ಸಂತ್ರಸ್ತೆಯ ತಾಯಿ ಕೆಲಸದ ನೆಪದಲ್ಲಿ ಮನೆಯಿಂದ ಹೊರ ಬಂದು, ಅಕ್ಕಪಕ್ಕದವರ ನೆರವಿನಿಂದ ಮಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ನಂತರ ಹುಳಿಮಾವು ಪೊಲೀಸ್‌ ಠಾಣೆಗೆ ಬಂದು ದೂರು ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT