ಶಾಲೆಗಳ ವಿಲೀನ: ಎಸ್‌ಎಫ್‌ಐ ಪ್ರತಿಭಟನೆ

7

ಶಾಲೆಗಳ ವಿಲೀನ: ಎಸ್‌ಎಫ್‌ಐ ಪ್ರತಿಭಟನೆ

Published:
Updated:

ಹೊಸಕೋಟೆ: ವಿಲೀನದ ನೆಪದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಎಸ್‌ಎಫ್‌ಐ ಸಂಘಟನೆಯ ತಾಲ್ಲೂಕು ಘಟಕದ ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

‘ಸರ್ಕಾರ ಒಂದೆಡೆ ಖಾಸಗಿ ಶಾಲೆಗಳ ಆರಂಭಕ್ಕೆ ಅನುಮತಿ ನೀಡುತ್ತಿದೆ. ಇನ್ನೊಂದೆಡೆ ಸರ್ಕಾರಿ ಶಾಲೆಗಳನ್ನು ಮುಚ್ಚುವ ನಿರ್ಧಾರಕೈಗೊಂಡಿದೆ’ ಎಂದು ಸಂಘಟನೆಯ ಮುಖಂಡ ಎಂ.ಸುಬ್ರಹ್ಮಣಿ ಆರೋಪಿಸಿದರು.

‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯದಲ್ಲಿ 14,451 ಶಾಲೆಗಳನ್ನು ಮುಚ್ಚಲು ಹೊರಟಿದ್ದಾರೆ. ಇದರಿಂದಾಗಿ ಸರ್ಕಾರದ ಶಿಕ್ಷಣ ವಿರೋಧಿ ನೀತಿ ಎದ್ದು ಕಾಣುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಮೊದಲು ಮೂಲ ಸೌಲಭ್ಯಗಳನ್ನು ಒದಗಿಸಬೇಕಿದೆ’ ಎಂದು ಅವರು ಹೇಳಿದರು

ಆಗಸ್ಟ್‌ 17 ರಂದು ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !