ಬೆಂಗಳೂರು: ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಸಂಸ್ಥೆಯ ಗೋಲ್ಡನ್ ಜ್ಯೂಬಿಲಿ ಫೌಂಡೇಷನ್ ವತಿಯಿಂದ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವಾದ ಶ್ರೀ ಶಂಕರ ಕ್ಯಾನ್ಸರ್ ಫೌಂಡೇಷನ್ಗೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ದೇಣಿಗೆ ನೀಡಲಾಗಿದೆ.

ಸುಮಾರು ₹4.31 ಕೋಟಿ ಮೌಲ್ಯದ 64-ಸ್ಲೈಸ್ ಸಿಟಿ ಸ್ಕ್ಯಾನ್ ಯಂತ್ರ ಹಾಗೂ ಹಾರ್ಟ್-ಲಂಗ್ ಮಷಿನ್ ಅನ್ನು ಆಸ್ಪತ್ರೆಗೆ ಹಸ್ತಾಂತರಿಸಲಾಯಿತು. ಈ ಉಪಕರಣಗಳು ಕ್ಯಾನ್ಸರ್ ರೋಗಿಗಳ ತಪಾಸಣೆ ಮತ್ತು ಚಿಕಿತ್ಸೆಯಲ್ಲಿ ನೆರವಾಗಲಿದ್ದು, ಬೆಂಗಳೂರು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಬರುವ ಸಾವಿರಾರು ರೋಗಿಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ.

ಎಲ್ಐಸಿಯ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಆರ್. ದೊರೆಸ್ವಾಮಿ ಮಾತನಾಡಿ, ‘ಸಮಾಜಕ್ಕೆ ಉಪಕಾರವಾಗುವ ಸಂಸ್ಥೆಗಳೊಂದಿಗೆ ಕೈಜೋಡಿಸುವುದು ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಷನ್ನ ಮುಖ್ಯ ಉದ್ದೇಶವಾಗಿದೆ. ಈ ಆಸ್ಪತ್ರೆ ಕಡಿಮೆ ವೆಚ್ಚದಲ್ಲಿ ಮತ್ತು ಉಚಿತವಾಗಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದು ಶ್ಲಾಘನೀಯ. ಈ ದೇಣಿಗೆಯಿಂದ ಇನ್ನಷ್ಟು ಜನರಿಗೆ ಗುಣಮಟ್ಟದ ಚಿಕಿತ್ಸೆ ಸಿಗಲಿದೆ’ ಎಂದು ಹೇಳಿದರು.

ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಪರವಾಗಿ ಮಾತನಾಡಿದ ಡಾ. ಬಿ. ಎಸ್. ಶ್ರೀನಾಥ್, ‘ಯಂತ್ರಗಳ ದೇಣಿಗೆಯಿಂದ ಚಿಕಿತ್ಸಾ ಸಾಮರ್ಥ್ಯ ಬಹಳಷ್ಟು ವೃದ್ಧಿಯಾಗಿದೆ. ಸಾವಿರಾರು ರೋಗಿಗಳಿಗೆ ನೇರ ಪ್ರಯೋಜನವಾಗಲಿದೆ’ ಎಂದರು.

ಕಾರ್ಯಕ್ರಮದಲ್ಲಿ ಎಲ್ ಐ ಸಿಯ ಹಿರಿಯ ಅಧಿಕಾರಿಗಳಾದ ಪುನೀತ್ ಕುಮಾರ್, ಆಶಿಶ್ ಕುಮಾರ್, ಪರಸ್ ನಾಥ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.