ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಹೋಟೆಲ್‌ನ 19ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Published 8 ಏಪ್ರಿಲ್ 2024, 23:29 IST
Last Updated 8 ಏಪ್ರಿಲ್ 2024, 23:29 IST
ಅಕ್ಷರ ಗಾತ್ರ

ಬೆಂಗಳೂರು: ಹೈಗ್ರೌಂಡ್ಸ್ ಠಾಣೆ ವ್ಯಾಪ್ತಿಯಲ್ಲಿರುವ ಹೋಟೆಲ್‌ವೊಂದರ ಕಟ್ಟಡದ 19ನೇ ಮಹಡಿಯಿಂದ ಜಿಗಿದು ಶರಣ್ (28) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ತಮಿಳುನಾಡಿನ ಶರಣ್, ಏಪ್ರಿಲ್ 7ರಂದು ಹೋಟೆಲ್‌ಗೆ ಬಂದಿದ್ದರು. 19ನೇ ಮಹಡಿಯಲ್ಲಿರುವ ಕೊಠಡಿಯಲ್ಲಿ ಉಳಿದುಕೊಂಡಿದ್ದರು. ಮುಂದಿನ ಎರಡು ದಿನ ಹೋಟೆಲ್‌ನ ಕೊಠಡಿಯಲ್ಲಿ ಉಳಿದುಕೊಳ್ಳುವುದಾಗಿ ಹೇಳಿದ್ದರು’ ಎಂದು ಪೊಲೀಸರು ತಿಳಿಸಿದರು.

‘ಸೋಮವಾರ ಮಧ್ಯಾಹ್ನ ಮಧ್ಯಾಹ್ನ 2.30 ಗಂಟೆ ಸುಮಾರಿಗೆ ಶರಣ್ ಮಹಡಿಯಿಂದ ಜಿಗಿದು ನೆಲಮಹಡಿಗೆ ಬಿದ್ದಿದ್ದರು. ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಹೋಗುವಷ್ಟರಲ್ಲಿ ಶರಣ್ ಮೃತಪಟ್ಟಿದ್ದರು. ಸ್ಥಳಕ್ಕೆ ಹೋಗಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT