ಬೆಂಗಳೂರು: ‘ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ (ನೀಟ್) ಆಕಾಂಕ್ಷಿಗಳ ಸಂಖ್ಯೆ ಮತ್ತು ಲಭ್ಯವಿರುವ ವೈದ್ಯಕೀಯ ಸೀಟುಗಳ ನಡುವೆ ಅಂತರ ಹೆಚ್ಚುತ್ತಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗವು (ಎನ್ಎಂಸಿ) ದೇಶದಾದ್ಯಂತ ಪದವಿಪೂರ್ವ ವೈದ್ಯಕೀಯ ಸೀಟುಗಳನ್ನು ಗಣನೀಯವಾಗಿ ಹೆಚ್ಚಿಸಬೇಕು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ಆಗ್ರಹಿಸಿದರು.

ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯು (ಎಸ್ಎಬಿವಿಎಂಸಿ) ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ 2019ನೇ ಬ್ಯಾಚ್ನ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ, ಮಾತನಾಡಿದರು.

‘ಪ್ರತಿ ವರ್ಷ ಐದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗುತ್ತಾರೆ. ಆದರೆ, ಇದಕ್ಕೆ ಪ್ರತಿಯಾಗಿ ಒಂದು ಲಕ್ಷ ವೈದ್ಯಕೀಯ ಸೀಟುಗಳು ಮಾತ್ರ ಲಭ್ಯವಿವೆ. ಈ ಅಸಮಾನತೆಯನ್ನು ತಕ್ಷಣ ನಿವಾರಿಸಬೇಕು. ದೇಶದಲ್ಲಿ ತರಬೇತಿ ಪಡೆಯುವ ವೈದ್ಯರು ವಿದೇಶದಲ್ಲಿಯೂ ಹೆಚ್ಚಿನ ಮನ್ನಣೆ ಪಡೆಯುತ್ತಿದ್ದಾರೆ. ನಮ್ಮ ವೈದ್ಯರು ಜಗತ್ತಿನ ಎಲ್ಲೆಡೆ ಚಿಕಿತ್ಸೆ ಒದಗಿಸುತ್ತಿದ್ದಾರೆ’ ಎಂದು ಶ್ಲಾಘಿಸಿದರು.

‘ವೈದ್ಯಕೀಯ ಸೀಟುಗಳ ಬೇಡಿಕೆ ಮತ್ತು ಲಭ್ಯತೆಯ ಅಂತರ ಕಡಿಮೆ ಮಾಡಲು ಎನ್ಎಂಸಿ ಮಧ್ಯ ಪ್ರವೇಶಿಸಬೇಕು’ ಎಂದು ಸಮಾರಂಭದಲ್ಲಿ ಉಪಸ್ಥಿತರಿದ್ದ ಎನ್ಎಂಸಿ ಅಧ್ಯಕ್ಷ ಡಾ.ಬಿ.ಎನ್. ಗಂಗಾಧರ ಅವರನ್ನು ಉದ್ದೇಶಿಸಿ ಹೇಳಿದರು.

‘ಈ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ ಹೆಚ್ಚುವರಿಯಾಗಿ 800 ಪದವಿಪೂರ್ವ ಮತ್ತು 600 ಸ್ನಾತಕೋತ್ತರ ವೈದ್ಯಕೀಯ ಸೀಟುಗಳಿಗೆ ಅನುಮೋದನೆ ಕೋರಿ ಎನ್ಎಂಸಿಗೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಸಚಿವರು ತಿಳಿಸಿದರು.

ಡಾ.ಬಿ.ಎನ್. ಗಂಗಾಧರ, ‘ಜಾಗತಿಕ ಮಟ್ಟದಲ್ಲಿ ಸುಮಾರು 3 ಕೋಟಿ ವೈದ್ಯರ ಕೊರತೆಯಿದೆ. ಯುವ ಪೀಳಿಗೆಯು ವೈದ್ಯಕೀಯ ವೃತ್ತಿಯನ್ನು ಕೈಗೆತ್ತಿಕೊಳ್ಳಬೇಕು. ಭಾರತೀಯ ವೈದ್ಯರಿಗೆ ವಿಶ್ವದಾದ್ಯಂತ ಹೆಚ್ಚಿನ ಬೇಡಿಕೆಯಿದೆ. ವೈದ್ಯಕೀಯ ವೃತ್ತಿಪರರ ಸಂಖ್ಯೆ ಹೆಚ್ಚಳ ಮಾಡುವುದು ಎನ್ಎಂಸಿಯ ಪ್ರಮುಖ ಗುರಿಗಳಲ್ಲಿ ಒಂದಾಗಿದೆ’ ಎಂದು ಹೇಳಿದರು.

ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ನಿರ್ದೇಶಕಿ ಡಾ. ಸುಜಾತಾ ರಾಥೋಡ್ ಮತ್ತು ಎಸ್ಎಬಿವಿಎಂಸಿ ನಿರ್ದೇಶಕ ಡಾ. ಮನೋಜ್ ಕುಮಾರ್ ಎಚ್.ವಿ. ಉಪಸ್ಥಿತರಿದ್ದರು.

‘ಶೀಘ್ರ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು’

‘ಆರೋಗ್ಯ ಮೂಲಸೌಕರ್ಯ ವಿಸ್ತರಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಮುಂದಾಗಿದ್ದೇವೆ. ಈ ಕಾಲೇಜುಗಳು ಆಸ್ಪತ್ರೆಯನ್ನೂ ಹೊಂದಿರುತ್ತವೆ. ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆರೈಕೆ ಘಟಕಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವ ಗುರಿಯನ್ನು ಹೊಂದಲಾಗಿದೆ’ ಎಂದು ಶರಣಪ್ರಕಾಶ ಪಾಟೀಲ ವಿವರಿಸಿದರು. ‘ವೈದ್ಯಕೀಯ ಕಾಲೇಜುಗಳಿಲ್ಲದ ಜಿಲ್ಲೆಗಳಲ್ಲಿ ಶೀಘ್ರದಲ್ಲಿಯೇ ಸುಸಜ್ಜಿತ ಸಂಸ್ಥೆಗಳನ್ನು ಆರಂಭಿಸಲಾಗುತ್ತದೆ. ಇವು ಆರ್ಥಿಕ ದುರ್ಬಲ ವರ್ಗಗಳ ಅರ್ಹ ವಿದ್ಯಾರ್ಥಿಗಳು ಸರ್ಕಾರಿ ವೆಚ್ಚದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ನೆರವಾಗುತ್ತವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.