ಬೆಂಗಳೂರು: ಮಹಿಳೆಯರಿಗೆ ಧಾರ್ಮಿಕ ಸ್ವಾತಂತ್ರ್ಯವನ್ನು 12ನೇ ಶತಮಾನದಲ್ಲಿ ಶರಣರು ನೀಡಿದ್ದರು ಎಂದು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.

ಬಸವೇಶ್ವರ ಸೇವಾ ಸಮಿತಿ, ಅಕ್ಕನ ಬಳಗ ಮಹಿಳಾ ಸಮಾಜ, ಅಖಿಲ ಭಾರತ ವೀರಶೈವ–ಲಿಂಗಾಯತ ಮಹಾಸಭಾ ಬೆಂಗಳೂರು ನಗರ ಘಟಕ ಶುಕ್ರವಾರ ಹಮ್ಮಿಕೊಂಡಿದ್ದ ಬಸವ ಜಯಂತಿ, ಅಕ್ಕಮಹಾದೇವಿ ಜಯಂತಿ ಮತ್ತು ವಿವಿಧ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ನಮ್ಮ ಮನದೊಳಗಿನ ಕಸವನ್ನು, ಕತ್ತಲನ್ನು ದೂರ ಮಾಡಲು ಇರುವ ಬೆಳಕು ಬಸವಣ್ಣ. ಜಾತಿ, ಲಿಂಗ, ಪ್ರದೇಶ, ಧರ್ಮಗಳನ್ನು ಮೀರಿದ ಮಾನವೀಯ ತತ್ವಗಳನ್ನು ಸಾರಿದ್ದರು. ಅನುಭವ ಮಂಟಪದಲ್ಲಿ ಹೆಣ್ಣುಮಕ್ಕಳಿಗೂ ಸಮಾನ ಸ್ಥಾನಮಾನ ನೀಡಿದ್ದರು. ನಾವು ಬದುಕಬೇಕು. ಬೇರೆಯವರನ್ನು ಬದುಕಿಸಬೇಕು. ಅದಕ್ಕಾಗಿ ಕಾಯಕ ಮತ್ತು ದಾಸೋಹ ತತ್ವವನ್ನು ನೀಡಿದ್ದರು’ ಎಂದು ನೆನಪು ಮಾಡಿಕೊಂಡರು.

ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಅವರಿಗೆ ‘ಬಸವಶ್ರೀ’ ಪ್ರಶಸ್ತಿ, ಐಸಿಎಟಿಟಿ ಫೌಂಡೇಶನ್ ಅಧ್ಯಕ್ಷೆ ಡಾ. ಶಾಲಿನಿ ಅವರಿಗೆ ‘ಅಕ್ಕಮಹಾದೇವಿ’ ಪ್ರಶಸ್ತಿ, ಫೈನ್ ಟೂಲ್ಸ್ ಇಂಡಿಯಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಟಿ.ಪಿ. ಕಲ್ಲೇಶ್ ಅವರಿಗೆ ಶಿವಕುಮಾರ ಸ್ವಾಮೀಜಿ ನೆನಪಿನಲ್ಲಿ ‘ಕಾಯಕ ರತ್ನ’ ಪ್ರಶಸ್ತಿ, ಕೈಗಾರಿಕೋದ್ಯಮಿ ತಿಪ್ಪೇಶಪ್ಪ ಅವರಿಗೆ ಸಿದ್ಧಲಿಂಗ ಸ್ವಾಮೀಜಿ ಹೆಸರಿನಲ್ಲಿ ‘ಕಾಯಕ ಯೋಗಿ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ವಿಶ್ವನಾಥಯ್ಯ ಅಧ್ಯಕ್ಷತೆ ವಹಿಸಿದ್ದರು. ವೀರಶೈವ–ಲಿಂಗಾಯತ ಮಹಾಸಭಾ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ಗುರುಸ್ವಾಮಿ, ಕಾಯಕ ಸೇವಾ ಟ್ರಸ್ಟ್ ಅಧ್ಯಕ್ಷ ಸಿ. ಮಹಾಂತೇಶ್, ಅಬ್ಬಿಗೆರೆ ವೀರಶೈವ ಸಂಘದ ಅಧ್ಯಕ್ಷ ರಾಜೇಂದ್ರ, ಅಕ್ಕನ ಬಳಗದ ಅಧ್ಯಕ್ಷೆ ಜಗದಾಂಬ ಸಿದ್ಧವೀರಪ್ಪ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.