ಶನಿವಾರ, ಅಕ್ಟೋಬರ್ 31, 2020
22 °C

ವರ್ಗಾವಣೆ: ಸಿಎಟಿ ಮೆಟ್ಟಿಲೇರಿದ ಶರತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ದಿಢೀರ್  ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಮೈಸೂರಿನ ಈ ಹಿಂದಿನ ಜಿಲ್ಲಾಧಿಕಾರಿ ಬಿ.ಶರತ್ ಕೇಂದ್ರ ಆಡಳಿತ ಮಂಡಳಿ (ಸಿಎಟಿ) ಮೆಟ್ಟಿಲೇರಿದ್ದು, ರಾಜ್ಯ ಸರ್ಕಾರಕ್ಕೆ ಸಿಎಟಿ ನೋಟಿಸ್ ನೀಡಿದೆ.

ತಿಂಗಳ ಹಿಂದಷ್ಟೇ ಮೈಸೂರು ಜಿಲ್ಲಾಧಿಕಾರಿಯಾಗಿ ಶರತ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನು ಎರಡು ದಿನಗಳ ಹಿಂದೆ ಸರ್ಕಾರ ವರ್ಗಾವಣೆ ಮಾಡಿದೆ. ಇದು ನಿಯಮ ಬಾಹಿರ ಆದೇಶವಾಗಿದ್ದು, ರದ್ದುಗೊಳಿಸಬೇಕು ಎಂದು ಶರತ್ ಅರ್ಜಿ ಸಲ್ಲಿಸಿದ್ದಾರೆ.

ಈ ಸಂಬಂಧ ಸರ್ಕಾರಕ್ಕೆ ನೋಟಿಸ್ ನೀಡಿರುವ ಸಿಎಟಿ, ಅಕ್ಟೋಬರ್ 6ಕ್ಕೆ ವಿಚಾರಣೆ ನಿಗದಿ ಮಾಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.