ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶರತ್‌ ಬಚ್ಚೇಗೌಡ ಕಾಂಗ್ರೆಸ್‌ ಸೇರ್ಪಡೆಗೆ ಸ್ಥಳೀಯ ಮುಖಂಡರ ಜತೆ ಡಿಕೆಶಿ ಸಭೆ

Last Updated 13 ಅಕ್ಟೋಬರ್ 2020, 21:29 IST
ಅಕ್ಷರ ಗಾತ್ರ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಶರತ್‌ ಬಚ್ಚೇಗೌಡ ಕಾಂಗ್ರೆಸ್‌ ಸೇರುವುದು ಬಹುತೇಕ ಖಚಿತವಾಗಿದೆ.

ಪಕ್ಷದ ಸ್ಥಳೀಯ ಮುಖಂಡರೊಂದಿಗೆ ಮಂಗಳವಾರ ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಶಾಸಕರ ಸೇರ್ಪಡೆಗೆ ಸಹಕಾರ ಕೋರಿದ್ದಾರೆ.

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಬ್ಲಾಕ್‌ ಕಾಂಗ್ರೆಸ್‌ ಸಮಿತಿಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಿವಿಧ ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಸದಸ್ಯರು, ಪಕ್ಷದ ಹಿರಿಯ ಮುಖಂಡರು ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಶರತ್‌ ಬಚ್ಚೇಗೌಡ ಪಕ್ಷ ಸೇರ್ಪಡೆಯ ವಿಚಾರ ತಿಳಿಸಿರುವ ಶಿವಕುಮಾರ್‌, ಅವರಿಗೆ ಪೂರ್ಣ ಸಹಕಾರ ನೀಡುವಂತೆ ಕೋರಿದ್ದಾರೆ.

ಶಾಸಕರಾದ ಕೃಷ್ಣ ಬೈರೇಗೌಡ, ಬೈರತಿ ಸುರೇಶ್‌, ವಿಧಾನ ಪರಿಷತ್‌ ಸದಸ್ಯ ಎಸ್‌. ರವಿ ಕೂಡ ಸಭೆಯಲ್ಲಿದ್ದರು. ಶಾಸಕರ ಬೆಂಬಲಿಗರು ಮತ್ತು ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರ ನಡುವೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಚರ್ಚೆನಡೆದಿದೆ.

ಅ.25ಕ್ಕೆ ಸೇರ್ಪಡೆ?: ಇದೇ 25ರಂದು ಶರತ್‌ ಬಚ್ಚೇಗೌಡ ಕಾಂಗ್ರೆಸ್‌ ಪಕ್ಷಕ್ಕೆ ಸೇರುವುದು ಬಹುತೇಕ ಖಚಿತ. ಕೆಪಿಸಿಸಿ ಕಚೇರಿಯಲ್ಲಿ ಸಾಂಕೇತಿಕವಾಗಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ. ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಶಿವಕುಮಾರ್‌ ಸೇರಿದಂತೆ ಹಿರಿಯ ನಾಯಕರ ಉಪಸ್ಥಿತಿಯಲ್ಲಿ ಅವರು ಪಕ್ಷದ ಸದಸ್ಯತ್ವ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT