‘ಕೈ’ ಹಿಡಿಯುತ್ತೇನೆ: ಶರತ್ ಬಚ್ಚೇಗೌಡ

ಬೆಂಗಳೂರು: ಕಾಂಗ್ರೆಸ್ ಸೇರಲು ನಿರ್ಧರಿಸಿರುವ ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಗುರುವಾರ ಭೇಟಿ ಮಾಡಿ ಚರ್ಚೆ ನಡೆಸಿದರು.
ಬಳಿಕ ಮಾತನಾಡಿದ ಶರತ್, ‘ಕಾಂಗ್ರೆಸ್ ಸೇರ್ಪಡೆ ಕುರಿತು ಸುರ್ಜೆವಾಲಾ ಅವರನ್ನು ಭೇಟಿ ಮಾಡಿದ್ದೇನೆ. ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ, ಸೇರುವ ದಿನವನ್ನು ನಿಗದಿಪಡಿಸುತ್ತೇನೆ’ ಎಂದರು.
‘ಕಾಂಗ್ರೆಸ್ ಬಾವುಟ ಹಿಡಿದ ಬಳಿಕ ಕ್ಷೇತ್ರದಲ್ಲಿ ಪಕ್ಷದ ಸಮಾವೇಶ ಆಯೋಜಿಸುವ ಬಗ್ಗೆ ತೀರ್ಮಾನಿಸುತ್ತೇನೆ. ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಸೇರುತ್ತಿದ್ದೇನೆ’ ಎಂದು ವಿವರಿಸಿದರು.
ಫೆ. 26ರಂದು ಶರತ್ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ ಎಂದು ಆ ಪಕ್ಷದ ಮೂಲಗಳು ಖಚಿತಪಡಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.