ಭಾನುವಾರ, ಆಗಸ್ಟ್ 1, 2021
20 °C

ಷೇರು ಮಾರುಕಟ್ಟೆ ಹೆಸರಿನಲ್ಲಿ ₹ 33.79 ಲಕ್ಷ ವಂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ನಗರದ ನಿವೃತ್ತ ನೌಕರರೊಬ್ಬರಿಂದ ₹ 33.79 ಲಕ್ಷ ಪಡೆದು ವಂಚಿಸಲಾಗಿದೆ.

ದೇವನಹಳ್ಳಿ ಬಳಿಯ ಸಾದಹಳ್ಳಿ ನಿವಾಸಿಯಾಗಿರುವ 72 ವರ್ಷದ ನಿವೃತ್ತ ನೌಕರರೊಬ್ಬರು ವಂಚನೆ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ದೂರುದಾರರಿಗೆ ಕರೆ ಮಾಡಿದ್ದ ಆರೋಪಿಗಳು, ‘ನಾವು ಷೇರು ಮಾರುಕಟ್ಟೆ ವ್ಯವಹಾರ ಮಾಡುತ್ತೇವೆ. ನೀವು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಕಡಿಮೆ ಅವಧಿಯಲ್ಲೇ ದ್ವಿಗುಣ ಮಾಡಿಕೊಡುತ್ತೇವೆ’ ಎಂದಿದ್ದರು. ಅವರ ಮಾತು ನಂಬಿದ್ದ ದೂರುದಾರ, ಆರೋಪಿಗಳ ಖಾತೆಗಳಿಗೆ ಹಂತ ಹಂತವಾಗಿ ₹ 33.79 ಲಕ್ಷ ಜಮೆ ಮಾಡಿದ್ದರು. ಈ ಸಂಗತಿ ದೂರಿನಲ್ಲಿದೆ’ ಎಂದು ಪೊಲೀಸರು ಹೇಳಿದರು.

‘ಹಣ ಪಡೆದ ನಂತರ ಆರೋಪಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು