ಬುಧವಾರ, ಜನವರಿ 19, 2022
26 °C

ವಿ.ಕೆ.ಶಶಿಕಲಾಗೆ ಜೈಲಿನಲ್ಲಿ ಆತಿಥ್ಯ: ಪಿಐಎಲ್‌ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತ ಗೆಳತಿ ವಿ.ಕೆ.ಶಶಿಕಲಾಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ನೀಡಲು ಜೈಲು ಅಧಿಕಾರಿಗಳು ಲಂಚ ಪಡೆದ ಪ್ರಕರಣದ ತನಿಖೆ ವಿಳಂಬ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.

ಕೋಲಾರದ ಎ.ಮುತ್ತು ಮಾಣಿಕ್ಯಂ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ‘ಇದು, ಈ ವಿಚಾರವಾಗಿ ಸಲ್ಲಿಸಲಾಗುತ್ತಿರುವ ಎರಡನೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿದ್ದು, ಕಾನೂನಿನ ದುರ್ಬಳಕೆಯಾಗಿದೆ. ಹಾಗಾಗಿ ಇದರ ವಿಚಾರಣೆ ಅಗತ್ಯವಿಲ್ಲ’ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿತು.

ಏತನ್ಮಧ್ಯೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪರ ವಕೀಲರು, ‘ಈ ಪ್ರಕರಣದ ಬಗ್ಗೆ ಎಸಿಬಿ ತನಿಖೆಗೆ ಕೋರಿದ್ದ ಅರ್ಜಿಗೆ ಸಂಬಂಧಿಸಿದಂತೆ ತನಿಖೆಯ ಅಂತಿಮ ವರದಿಯನ್ನು ಸಲ್ಲಿಸಲು ಹೈಕೋರ್ಟ್‌ ಆದೇಶಿಸಿತ್ತು. ಈಗಾಗಲೇ ಗಡುವು ಪೂರ್ಣಗೊಂಡಿರುವ ಕಾರಣ ಮತ್ತಷ್ಟು ಕಾಲಾವಕಾಶ ಕಲ್ಪಿಸಬೇಕು ಎಂದು ಕೋರಿ ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ಮಧ್ಯಂತರ ಅರ್ಜಿಯನ್ನು ಮತ್ತೊಂದು ದಿನ ವಿಚಾರಣೆಗೆ ನಿಗದಿಪಡಿಸುವಂತೆ ರಿಜಿಸ್ಟ್ರಾರ್ ಕಚೇರಿಗೆ ಸೂಚಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು