ಪ್ಲಾಟ್‌ಫಾರಂ ರಸ್ತೆಯಲ್ಲಿ ಮಣ್ಣಿನ ರಾಶಿ ಹಾಕಿರುವುದರಿಂದ ನಿತ್ಯ ಸಂಚಾರ ದಟ್ಟಣೆ ಉಂಟಾಗುತ್ತಿದೆ
ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.
ಪ್ಲಾಟ್‌ಫಾರಂ ರಸ್ತೆಯಲ್ಲಿ ಕೇಬಲ್ ಅಳವಡಿಸಲು ಪಾದಚಾರಿ ಮಾರ್ಗ ಅಗೆದು ಹಾಗೆಯೇ ಬಿಡಲಾಗಿದೆ
ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.
ಅಂಗಡಿ ಮುಂಭಾಗದಲ್ಲಿ ಮಣ್ಣಿನ ರಾಶಿ ಹಾಕಲಾಗಿದೆ. ಇದರಿಂದ ಸಾರ್ವಜನಿಕರ ಓಡಾಟಕ್ಕೆ ಅನನಕೂಲವಾಗಿದೆ. ಮಳೆ ಬಂದರೆ ರಸ್ತೆಯು ಕೆಸರು ಗದ್ದೆಯಾಗುತ್ತದೆ. ಅಭಿವೃದ್ಧಿ ಕಾಮಗಾರಿಗೆ ನಮ್ಮ ವಿರೋಧವಿಲ್ಲ. ಆದರೆ ವಿಳಂಬ ನೀತಿ ಅನುಸರಿಸುವುದು ಸರಿಯಲ್ಲ. ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು
ಪರಮೇಶ್ವರ್ ಅಡಿಗ ಪಾನ್‌ಶಾಪ್ ಅಂಗಡಿ ವ್ಯಾಪಾರಿ
ಮ್ಮ ಪಾರ್ಸೆಲ್ ಅಂಗಡಿಗೆ ಬರುವ ಔಷಧಿಗಳನ್ನು ಪಡೆದುಕೊಳ್ಳಲು ಬರುವ ಗ್ರಾಹಕರಿಗೆ ತೊಂದರೆ ಆಗುತ್ತಿದೆ. ಪಾರ್ಸೆಲ್‌ಗಳನ್ನು ವಾಹನದಿಂದ ಅನ್‌ಲೋಡ್ ಮಾಡಿಕೊಳ್ಳಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರದೀಪ್ ಪಾರ್ಸೆಲ್ ಅಂಗಡಿ ಸಿಬ್ಬಂದಿ
ಈ ರಸ್ತೆಯಲ್ಲಿ ಬೆಳಿಗ್ಗೆ 8 ರಿಂದ 10 ಗಂಟೆವರೆಗೆ ಹಾಗೂ ಸಂಜೆ 4ರಿಂದ 8 ಗಂಟೆಯ ಅವಧಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿರುತ್ತವೆ. ಮೆಜೆಸ್ಟಿಕ್‌ಗೆ ನಡೆದುಕೊಂಡು ಹೋದರೆ ಬೇಗ ತಲುಪಬಹುದು. ಆದರೆ ವಾಹನದಲ್ಲಿ ಸಂಚರಿಸಲು ಆಗುವುದಿಲ್ಲ. ಕಾಮಗಾರಿಯ ಜಾಗದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ. ಯಾರಾದರೂ ಗುಂಡಿಗಳಲ್ಲಿ ಬಿದ್ದು ಅನಾಹುತ ಆಗುವ ಸಾಧ್ಯತೆ ಇದೆ.