ಭಾನುವಾರ, ಮಾರ್ಚ್ 29, 2020
19 °C
ವಿಚಾರಣೆ ನೆಪದಲ್ಲಿ ಹಲ್ಲೆ ಆರೋಪ

ಶಿವಾಜಿನಗರ ಇನ್‌ಸ್ಪೆಕ್ಟರ್‌ ವಿರುದ್ಧ ಎಫ್‌ಐಆರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹಿಳೆಯೊಬ್ಬರಿಗೆ ಬೆದರಿಕೆಯೊಡ್ಡಿದ್ದ ಆರೋಪದಡಿ ವಿಚಾರಣೆಗೆ ಕರೆಸಿದ್ದ ವೇಳೆ ವಾಸೀಂ ಪಾಷ (35) ಎಂಬುವರ ಮೇಲೆ ಹಲ್ಲೆ ನಡೆಸಿದ್ದ ಆರೋಪದಡಿ ಶಿವಾಜಿನಗರ ಠಾಣೆ ಇನ್‌ಸ್ಪೆಕ್ಟರ್‌ ಸಿದ್ದರಾಜು ಹಾಗೂ ನಾಲ್ವರು ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

‘ಇನ್‌ಸ್ಪೆಕ್ಟರ್ ಹಾಗೂ ಸಿಬ್ಬಂದಿ ಠಾಣೆಗೆ ಕರೆಸಿ ವಿನಾಕಾರಣ ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಲು ನಿರ್ದೇಶನ ನೀಡಬೇಕು’ ಎಂದು ಕೋರಿ ವಾಸೀಂ ಪಾಷ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ನ್ಯಾಯಾಲಯ ನೀಡಿರುವ ನಿರ್ದೇಶನದಂತೆ ಅಪರಾಧ ಸಂಚು (ಐಪಿಸಿ 34) ಹಾಗೂ ಹಲ್ಲೆ (ಐಪಿಸಿ 324) ಆರೋಪದಡಿ ಇದೀಗ ಪ್ರಕರಣ ದಾಖಲಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು