ಬೆಂಗಳೂರು: ಪೊಲೀಸರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಮಂಗಳವಾರ ಶಿವಾಜಿನಗರ ಹಾಗೂ ವೈಯಾಲಿಕಾವಲ್ ಠಾಣೆ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಶಿವಾಜಿನಗರ ಠಾಣೆ ಹೆಡ್ ಕಾನ್ಸ್ಟೆಬಲ್ ಹಾಗೂ ವೈಯಾಲಿಕಾವಲ್ ಠಾಣೆ ಕಾನ್ಸ್ಟೆಬಲ್ಗೆ ಸೋಂಕು ತಗುಲಿರುವುದು ಪರೀಕ್ಷೆಯಿಂದ ದೃಢಪಟ್ಟಿದೆ. ಎರಡೂ ಠಾಣೆಗಳನ್ನು ತಾತ್ಕಾಲಿಕವಾಗಿ ಸೀಲ್ಡೌನ್ ಮಾಡಲಾಗಿದೆ.

ಸುದ್ದಿಗಾರರ ಜೊತೆ ಮಾತನಾಡಿದ ಕೇಂದ್ರ ವಿಭಾಗದ ಡಿಸಿಪಿ ಚೇತನ್ಸಿಂಗ್ ರಾಥೋಡ್, ‘ವೈಯಾಲಿಕಾವಲ್ ಠಾಣೆಯ ಸೋಂಕಿತ ಕಾನ್ಸ್ಟೆಬಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸಂಪರ್ಕದಲ್ಲಿದ್ದ 13 ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಠಾಣೆಗೆ ಸೋಂಕು ನಿವಾರಕ ಸಿಂಪಡಿಸಿ ಸೀಲ್ಡೌನ್ ಮಾಡಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.