ಬೆಂಗಳೂರು: ‘ಮಹನೀಯರು ಹಾಗೂ ಶರಣರ ಜಯಂತಿಗಳನ್ನು ಜಾತಿಗಳ ನಡುವೆ ಹಂಚಿಕೊಂಡಿರುವುದು ಸರಿಯಲ್ಲ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್.ತಂಗಡಗಿ ವಿಷಾದ ವ್ಯಕ್ತಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ನಡೆದ ಕಾಯಕ ಶರಣರ ಜಯಂತಿಯಲ್ಲಿ ಎಚ್. ಲಿಂಗಪ್ಪ ಅವರಿಗೆ ಕಾಯಕ ಶರಣಶ್ರೀ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

‘ಲಿಂಗಪ್ಪ ಅವರನ್ನು 'ಕಾಯಕ ಶರಣಶ್ರೀ' ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕೆ, ನಮ್ಮ ಸಮಾಜದವರಿಗೆ ಪ್ರಶಸ್ತಿ ನೀಡಬೇಕಿತ್ತು ಎಂದು ಮುಖಂಡೊಬ್ಬರು ಕರೆ ಮಾಡಿದ್ದರು. ಕಳೆದ ಬಾರಿ ಕನಕಶ್ರೀ ಪ್ರಶಸ್ತಿಯನ್ನು ಬ್ರಾಹ್ಮಣ ಸಮುದಾಯದ, ಸಮ- ಸಮಾಜದ ಬಗ್ಗೆ ಒಲವು ಹೊಂದಿದ್ದವರಿಗೆ ನೀಡಿದ್ದೆವು. ಇಲ್ಲಿ ಯಾವುದೇ ಜಾತಿಗಿಂತ ಅವರ ತತ್ವ ಸಿದ್ಧಾಂತ ಮುಖ್ಯ’ ಎಂದು ತಿಳಿಸಿದರು.

‘ಪ್ರತಿ ಸಮಾಜದಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳಿರುತ್ತವೆ. ಅದೆಲ್ಲವನ್ನು ಪಕ್ಕಕ್ಕಿಟ್ಟು ಮುನ್ನಡೆದಾಗ ಸಮಾಜಕ್ಕೆ ಒಳಿತಾಗುತ್ತದೆ. ಒಗ್ಗಟ್ಟಿನಿಂದ ಆಯಾ ಸಮುದಾಯಗಳು ಗಟ್ಟಿಯಾಗುತ್ತವೆ’ ಎಂದು ತಿಳಿಸಿದರು.

ಬಸವ ಹರಳಯ್ಯ ಸ್ವಾಮೀಜಿ, ಅಬಕಾರಿ ಇಲಾಖೆ ಸಚಿವ ಆರ್.ಬಿ.ತಿಮ್ಮಾಪುರ, ರಾಜ್ಯಸಭಾ ಮಾಜಿ ಸಂಸದ ಎಲ್.ಹನುಮಂತಯ್ಯ, ಅಖಿಲ ಕರ್ನಾಟಕ ಡೋಹರ ಕಕ್ಕಯ್ಯ ಸಮಾಜದ ಅಧ್ಯಕ್ಷ ಸಂತೋಷ್ ಸುರೇಂದ್ರ ಸವಣೂರು, ಮಾದಿಗ ಸಮುದಾಯದ ಎಂ.ಗುರುಮೂರ್ತಿ, ಆದಿಜಾಂಬವ ಸಮಾಜದ ಸಿದ್ದರಾಜು, ಇಲಾಖಾ ಕಾರ್ಯದರ್ಶಿ ಜೆ.ಮಂಜುನಾಥ್, ನಿರ್ದೇಶಕಿ ಕೆ.ಎಂ. ಗಾಯಿತ್ರಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.