ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಕೆ. ಶಿವಕುಮಾರ್‌ ಭೇಟಿಯಾದ ಶಿವರಾಂ ಹೆಬ್ಬಾರ್‌, ಎಸ್‌.ಟಿ. ಸೋಮಶೇಖರ್‌

Published 13 ಮೇ 2024, 16:14 IST
Last Updated 13 ಮೇ 2024, 16:14 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಶಾಸಕರಾದ ಅರಬೈಲ್‌ ಶಿವರಾಂ ಹೆಬ್ಬಾರ್‌ ಮತ್ತು ಎಸ್‌.ಟಿ. ಸೋಮಶೇಖರ್‌ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಸೋಮವಾರ ಭೇಟಿಮಾಡಿ ಚರ್ಚಿಸಿದರು.

ರಾಜ್ಯಸಭಾ ಚುನಾವಣೆ ದಿನದಿಂದಲೂ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಇಬ್ಬರೂ ಶಾಸಕರು, ಕಾಂಗ್ರೆಸ್‌ ನಾಯಕರ ಜತೆ ನಿಕಟವಾಗಿದ್ದಾರೆ. ಶಿವರಾಂ ಹೆಬ್ಬಾರ್‌ ಅವರ ಮಗ ವಿವೇಕ್‌ ಹೆಬ್ಬಾರ್‌ ಲೋಕಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್‌ ಸೇರಿದ್ದರು. ಸೋಮವಾರದ ಭೇಟಿ ವೇಳೆ ವಿವೇಕ್‌ ಹೆಬ್ಬಾರ್‌ ಕೂಡ ಜತೆಗಿದ್ದರು.

ಲೋಕಸಭಾ ಚುನಾವಣೆಯಲ್ಲಿ ಶಿವರಾಂ ಹೆಬ್ಬಾರ್‌ ಮತ್ತು ಸೋಮಶೇಖರ್‌ ಅವರು ಬಿಜೆಪಿ ಅಭ್ಯರ್ಥಿಗಳ ಪ್ರಚಾರದಲ್ಲಿ ಪಾಲ್ಗೊಂಡಿರಲಿಲ್ಲ. ಪಕ್ಷದ ಯಾವುದೇ ಚಟುವಟಿಕೆಗಳಲ್ಲೂ ಭಾಗವಹಿಸಿರಲಿಲ್ಲ.

ಭೇಟಿ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಸೋಮಶೇಖರ್‌, ‘ಹಲವು ದಿನಗಳಿಂದ ಶಿವಕುಮಾರ್‌ ಅವರನ್ನು ಭೇಟಿಮಾಡಿರಲಿಲ್ಲ. ಲೋಕಸಭಾ ಚುನಾವಣೆ ಮುಗಿದಿರುವುದರಿಂದ ಭೇಟಿ ಮಾಡಿದೆವು. ರಾಜಕೀಯ ಕುರಿತು ಯಾವುದೇ ಚರ್ಚೆ ನಡೆಸಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT