ಈ ಹಿಂದೆ ಅಧ್ಯಕ್ಷರಾಗಿದ್ದ ಮುನಿರತ್ನಮ್ಮ ಮುನಿಬೈಲಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕಾಗಿ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕಾಗಿ ಸಂಜೀವಯ್ಯ ಅವರೊಬ್ಬರೆ ನಾಮಪತ್ರ ಸಲ್ಲಿಸಿದ್ದರು. ಒಟ್ಟು 18 ಸದಸ್ಯಬಲ ಹೊಂದಿರುವ ಪಂಚಾಯಿತಿಯಲ್ಲಿ 13 ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ಐದು ಸದಸ್ಯರು ಗೈರು ಹಾಜರಾಗಿದ್ದರು.