ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸೋಲಿನ ಭೀತಿಯಿಂದ ಶೋಭಾ ಕ್ಷೇತ್ರ ಬದಲಾವಣೆ: ಸಚಿವ ಬೈರತಿ ಸುರೇಶ್ ವ್ಯಂಗ್ಯ

Published 26 ಮಾರ್ಚ್ 2024, 15:21 IST
Last Updated 26 ಮಾರ್ಚ್ 2024, 15:21 IST
ಅಕ್ಷರ ಗಾತ್ರ

ಕೆ.ಆರ್.ಪುರ: ‘ಬೆಂಗಳೂರು ಉತ್ತರ ಲೋಕಸಭಾ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಸೋಲಿನ ಭೀತಿಯಿಂದ ಪ್ರತಿ ಚುನಾವಣೆಯಲ್ಲಿ ಕ್ಷೇತ್ರ ಬದಲಾವಣೆ ಮಾಡುತ್ತಿದ್ದಾರೆ’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ವ್ಯಂಗ್ಯವಾಡಿದರು.

ಕೆ.ಆರ್.ಪುರದಲ್ಲಿ ನಡೆದ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಶೋಭಾ ಕರಂದ್ಲಾಜೆ ಅವರು ವಿಧಾನಸಭೆ, ಲೋಕಸಭೆ ಸೇರಿದಂತೆ ಐದು ಬಾರಿ ಕ್ಷೇತ್ರ ಬದಲಾವಣೆ ಮಾಡಿದ್ದಾರೆ. ಒಂದೆಡೆ ನೆಲೆನಿಲ್ಲದೆ ಕ್ಷೇತ್ರ ಬದಲಾವಣೆ ಮಾಡುತ್ತ ಬಂದಿದ್ದಾರೆ. ಒಮ್ಮೆ ಗೆದ್ದ ನಂತರ ಕ್ಷೇತ್ರದ ಕಡೆ ಮುಖ ಮಾಡದೆ, ಜನರಿಗೆ ಕೊಟ್ಟ ಆಶ್ವಾಸನೆ ಈಡೇರಿಸದೆ ದೆಹಲಿ ಮತ್ತು ಬೆಂಗಳೂರಿನಲ್ಲಿ ಕಾಲಹರಣ ಮಾಡಿದ್ದಾರೆ’ ಎಂದು ಆರೋಪಿಸಿದರು.

‘ಚುನಾವಣೆ ಬಂದಾಗ ಕ್ಷೇತ್ರ ನೆನಪಾಗಿ ಮಂಗಳೂರು ಕ್ಷೇತ್ರದಲ್ಲಿ ಓಡಾಡಲು ಆರಂಭಿಸಿದಾಗ ಅಲ್ಲಿನ ಜನರು ಗೋ ಬ್ಯಾಕ್ ಅಭಿಯಾನ ನಡೆಸಿದ್ದರು. ಮತದಾರರಿಗೆ ಹೆದರಿ ಈಗ ಉತ್ತರ ಲೋಕಸಭಾ ಕ್ಷೇತ್ರಕ್ಕೆ ಬಂದಿದ್ದಾರೆ. ಇವರಿಗೆ ಮತ ನೀಡಿದರೆ ಮತ್ತೆ ಗೋಬ್ಯಾಕ್ ಅಭಿಯಾನ ನಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಇಂತಹ ರಾಜಕಾರಣಿಗಳಿಗೆ ಮತ್ತೊಮ್ಮೆ ಅವಕಾಶ ನೀಡಿದರೆ ದೇಶ ಮತ್ತು ರಾಜ್ಯ ಎರಡು ಹಾಳಾಗುತ್ತದೆ’ ಎಂದು ಹೇಳಿದರು.

‘ಶೋಭಾ ಕರಂದ್ಲಾಜೆ ಅಂತರವನ್ನು ಅಧಿಕಾರದಿಂದ ದೂರವಿಡಬೇಕು. ಸುಶಿಕ್ಷಿತ ಪ್ರಜ್ಞಾವಂತ ಸಜ್ಜನ ರಾಜಕಾರಣಿ ಎಂದೇ ಗುರುತಿಸಿಕೊಂಡಿರುವ ಪ್ರೊ.ರಾಜೀವ್ ಗೌಡ ಅವರಿಗೆ ಅವಕಾಶ ಮಾಡಿಕೊಡಬೇಕು. ಕೋಮುಗಲಭೆ, ದ್ವೇಷ ರಾಜಕಾರಣ ಮಾಡುವ ಬಿಜೆಪಿಯಿಂದ ಅಭಿವೃದ್ಧಿ ಅಸಾಧ್ಯ. ರಾಜ್ಯ ದೇಶ ಉದ್ಧಾರಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ’ ಎಂದು ಮನವಿ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜೀವ್ ಗೌಡ ಮಾತನಾಡಿದರು. ಇದೇ ವೇಳೆ ಸಚಿವ ಕೃಷ್ಣ ಬೈರೇಗೌಡ, ಶಾಸಕ ಶರತ್ ಬಚ್ಚೇಗೌಡ ಅವರ ಸಮ್ಮುಖದಲ್ಲಿ ಪಾಲಿಕೆ ಮಾಜಿ ಸದಸ್ಯರಾದ ಬಂಡೆ ರಾಜು, ಕಲ್ಕೆರೆ ಶ್ರೀನಿವಾಸ್, ವೀರಣ್ಣ ಸೇರಿದಂತೆ ನೂರಾರು ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾದರು.

ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಮುಖಂಡರಾದ ಡಿ.ಕೆ.ಮೋಹನ್, ನಾರಾಯಣಸ್ವಾಮಿ, ನಂದಕುಮಾರ್, ಡಿ.ಎ.ಗೋಪಾಲ್, ಅಗರ ಪ್ರಕಾಶ್, ರಾಕೇಶ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT