ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗೋ ಬ್ಯಾಂಕ್‌ ಪ್ರತಿಭಟನೆಯ ಹಿಂದೆ ಷಡ್ಯಂತ್ರ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Published 15 ಮಾರ್ಚ್ 2024, 14:39 IST
Last Updated 15 ಮಾರ್ಚ್ 2024, 14:39 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: ‘ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಈ ಹಿಂದೆ ಶಾಸಕಿಯಾಗಿ ಆಯ್ಕೆಯಾಗಿ ಸಚಿವೆ ಆಗಿದ್ದೆ. ಹಾಗಾಗಿ, ಈ ಭಾಗಗಳಲ್ಲಿ ಚಿರಪರಿಚಿತಳಾಗಿದ್ದೇನೆ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಶೆಟ್ಟಿಹಳ್ಳಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಿಜೆಪಿ ವರಿಷ್ಠರು ಅವಕಾಶ ಮಾಡಿಕೊಟ್ಟಿದ್ದಾರೆ. ನಾವೆಲ್ಲರೂ ಒಗ್ಗಟ್ಟಾಗಿ ರಾಜ್ಯದಾದ್ಯಂತ 28 ಕ್ಷೇತ್ರಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಇಟ್ಟುಕೊಳ್ಳಬೇಕು’ ಎಂದರು.

ಶೆಟ್ಟಿಹಳ್ಳಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಶಾಸಕ ಎಸ್. ಮುನಿರಾಜು ಅವರನ್ನು ಭೇಟಿ ಮಾಡಿ ಬೆಂಬಲ ಕೋರಿದರು.
ಶೆಟ್ಟಿಹಳ್ಳಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಶಾಸಕ ಎಸ್. ಮುನಿರಾಜು ಅವರನ್ನು ಭೇಟಿ ಮಾಡಿ ಬೆಂಬಲ ಕೋರಿದರು.

‘ಕರ್ನಾಟಕದ ಕಾರ್ಯಕರ್ತರಲ್ಲಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕೆಂಬ ಉತ್ಸಾಹ ಎಲ್ಲೆಡೆ ಕಾಣುತ್ತಿದೆ. ಆ ವಿಶ್ವಾಸ ನಮಗೂ ಇದೆ. ಜೆಡಿಎಸ್ ಕೂಡ ನಮ್ಮ ಜೊತೆ ಬಂದಮೇಲೆ ದಕ್ಷಿಣ ಕರ್ನಾಟಕದಲ್ಲಿ ಗೆಲುವು ಕಾಣಲು ಸಾಧ್ಯವಾಗಲಿದೆ’ ಎಂದು ತಿಳಿಸಿದರು.

‘ಗೋ ಬ್ಯಾಕ್ ಪ್ರತಿಭಟನೆ ಯಾರು ಮಾಡಿಸಿದ್ದಾರೆ? ಯಾರು ಘೋಷಣೆಗಳನ್ನು ಕೂಗಿಸಿದ್ದಾರೆ? ಎಂದು ಗೊತ್ತಿದೆ. ಇದರ ಹಿಂದೆ ಷಡ್ಯಂತರವಿದೆ. ಅದರ ಬಗ್ಗೆ ಹೆಚ್ಚು ಮಾತನಾಡುವ ಅವಶ್ಯಕತೆ ಇಲ್ಲ’ ಎಂದರು.

‘ಎಲ್ಲರಿಗೂ ಅವಕಾಶ ಕೇಳುವ ಹಕ್ಕಿದೆ. ಆದರೆ, ಪಕ್ಷ ಅಧಿಕೃತ ಅಭ್ಯರ್ಥಿಯನ್ನಾಗಿ ಯಾರನ್ನು ಘೋಷಣೆ ಮಾಡುತ್ತದೊ ಅವರ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ನಿರೀಕ್ಷೆ ಇದೆ’ ಎಂದರು.

ಶೆಟ್ಟಿಹಳ್ಳಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಶಾಸಕ ಎಸ್. ಮುನಿರಾಜು ಅವರನ್ನು ಭೇಟಿ ಮಾಡಿ ಬೆಂಬಲ ಕೋರಿದರು.ನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಹರೀಶ್ ಉತ್ತರ ಜಿಲ್ಲಾ ಲೋಕಸಭಾ ಚುನಾವಣೆ ಸಂಚಾಲಕ ಸಚ್ಚಿದಾನಂದ ಕ್ಷೇತ್ರದ ಮಹಿಳಾ ಮುಖಂಡರು ಯುವ ಮೋರ್ಚಾ ಮುಖಂಡರು ಬಿಜೆಪಿ ಹಿರಿಯ ಮುಖಂಡರು ಇದ್ದರು.

ಶಾಸಕ ಎಸ್.ಮುನಿರಾಜು ಮಾತನಾಡಿದರು. ನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಹರೀಶ್, ಉತ್ತರ ಲೋಕಸಭಾ ಕ್ಷೇತ್ರದ ಚುನಾವಣೆಯ ಸಂಚಾಲಕ ಸಚ್ಚಿದಾನಂದ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT