ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಷ್ಠಾವಂತ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ: ಶೋಭಾ

ಅಪಘಾತದಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತ ಪ್ರಕಾಶ್ ಅಂತ್ಯಕ್ರಿಯೆಯಲ್ಲಿ ಭಾಗಿ
Published 10 ಏಪ್ರಿಲ್ 2024, 15:34 IST
Last Updated 10 ಏಪ್ರಿಲ್ 2024, 15:34 IST
ಅಕ್ಷರ ಗಾತ್ರ

ಕೆ.ಆರ್.ಪುರ: ಬಿಜೆಪಿ ಪ್ರಚಾರ ರ್‍ಯಾಲಿ ವೇಳೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತ ಪ್ರಕಾಶ್ ಅವರ ಅಂತ್ಯಕ್ರಿಯೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಬೈರತಿ ಬಸವರಾಜ ಪಾಲ್ಗೊಂಡರು. ಮೃತನ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು.

ಮಂಗಳವಾರ ಟಿ.ಸಿ. ಪಾಳ್ಯದ ರುದ್ರಭೂಮಿಯಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಶೋಭಾ ಕರಂದ್ಲಾಜೆ, ‘ನಮ್ಮ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ಪ್ರಕಾಶ್ ಅವರ ಸಾವು ದುಃಖ ತಂದಿದೆ. ನಮ್ಮ ಪಕ್ಷದ ಒಬ್ಬ ನಿಷ್ಠಾವಂತ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ದೇವರು ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ. ಅವರ ಕುಟುಂಬದ ಜತೆ ನಾವಿದ್ದೇವೆ‘ ಎಂದು ಹೇಳಿದರು.

ಶಾಸಕ ಬೈರತಿ ಬಸವರಾಜ, ‘ನಮ್ಮ ಪಕ್ಷದ ಪ್ರಾಮಾಣಿಕ ಕಾರ್ಯಕರ್ತನನ್ನು ಕಳೆದುಕೊಂಡಿರುವುದು ನೋವಿನ ಸಂಗತಿ. ಅವರ ಕುಟುಂಬದವರು ಯಾವುದೇ ಸಂದರ್ಭದಲ್ಲಿ ಕಷ್ಟ ಎಂದು ಬಂದರೆ ನಾನು ಮತ್ತು ಅಭ್ಯರ್ಥಿ ಶೋಭಾ ಕರಂದ್ಲಾಜೆಯವರು ಅವರಿಗೆ ಸಹಕಾರ ನೀಡುತ್ತೇವೆ‘ ಎಂದು ತಿಳಿಸಿದರು.

ಕ್ಷೇತ್ರದ ಮಂಡಲ ಅಧ್ಯಕ್ಷ ಮುನೇಗೌಡ, ಪಾಲಿಕೆ ಮಾಜಿ ಸದಸ್ಯ ಅಂತೋಣಿ ಸ್ವಾಮಿ ಸೇರಿದಂತೆ ಅನೇಕರು ಮುಖಂಡರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT