ಭಾನುವಾರ, ನವೆಂಬರ್ 29, 2020
25 °C

ಶೋಭಾಗೆ ಸರಳಾ ರಂಗನಾಥ್ ರಾವ್ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸರಳಾ ರಂಗನಾಥ್ ರಾವ್ ಸ್ಮಾರಕ ಪ್ರತಿಷ್ಠಾನದ ವತಿಯಿಂದ ಲೇಖಕಿಯರ ಚೊಚ್ಚಲ ಕೃತಿಗೆ ನೀಡಲಾಗುವ 'ಸರಳಾ ರಂಗನಾಥ್ ರಾವ್ ಪ್ರಶಸ್ತಿ'ಗೆ ಶಿರಸಿಯ ಶೋಭಾ ಹಿರೇಕೈ ಕಂಡ್ರಾಜಿ ಅವರ 'ಅವ್ವ ಮತ್ತು ಅಬ್ಬಲಿಗೆ' ಕವನ ಸಂಕಲನ ಆಯ್ಕೆಯಾಗಿದೆ.

ಪ್ರತಿಷ್ಠಾನದ ಗೌರವಾಧ್ಯಕ್ಷ ಎಚ್.ಎಸ್.ವೆಂಕಟೇಶ ಮೂರ್ತಿ, ಕವಿ ಚಿಂತಾಮಣಿ ಕೊಡ್ಲೆಕೆರೆ ಹಾಗೂ ಜಿ.ಎನ್.ರಂಗನಾಥ್ ರಾವ್ ಅವರು ಈ ಪ್ರಶಸ್ತಿಗೆ ಶೋಭಾ ಅವರನ್ನು ಆಯ್ಕೆ ಮಾಡಿದ್ದಾರೆ.

ಪ್ರಶಸ್ತಿ ₹10 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಬೆಂಗಳೂರಿನಲ್ಲಿ ಜನವರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.