ವಿದ್ಯಾರ್ಥಿಗಳಿಗೆ ಶೂ,ಸಾಕ್ಸ್‌ ವಿತರಣೆ ಶೀಘ್ರ

7
ಶಾಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿಗೆ ಹಣ ಬಿಡುಗಡೆ

ವಿದ್ಯಾರ್ಥಿಗಳಿಗೆ ಶೂ,ಸಾಕ್ಸ್‌ ವಿತರಣೆ ಶೀಘ್ರ

Published:
Updated:
ಸಾಂದರ್ಭಿಕ ಚಿತ್ರ

ಬೆಂಗಳೂರು: ಒಂದು ತಿಂಗಳಿನಿಂದ ಬರಿಗಾಲಿನಲ್ಲಿ ಶಾಲೆಗೆ ಹೋಗುತ್ತಿದ್ದ ಮಕ್ಕಳಿಗೆ ಶೂ, ಸಾಕ್ಸ್‌ಗಳು ದೊರೆಯುವ ಕಾಲ ಸನ್ನಿಹಿತವಾಗಿದ್ದು, ಇನ್ನೆರಡು ವಾರಗಳಲ್ಲಿ ವಿತರಣೆಯಾಗಲಿವೆ.

‘ಒಂದು ಜೊತೆ ಶೂ ಹಾಗೂ ಎರಡು ಜೊತೆ ಸಾಕ್ಸ್‌ ವಿತರಿಸಲು ಕೆಲ ದಿನಗಳ ಹಿಂದಷ್ಟೇ ಸರ್ಕಾರದಿಂದ ಹಣ ಬಿಡುಗಡೆಯಾಗಿದ್ದು, ಅದನ್ನು ನೇರವಾಗಿ ಎಲ್ಲ ಶಾಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿಗೆ (ಎಸ್‌ಡಿಎಂಸಿ) ವರ್ಗಾಯಿಸಲಾಗಿದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ.ಎಂ.ಟಿ.ರೇಜು ‘ಪ್ರಜಾವಾಣಿ’ಗೆ ತಿಳಿಸಿದರು.

‘ಈಗಾಗಲೇ ಎಸ್‌ಡಿಎಂಸಿಗಳು ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಿವೆ. ಇನ್ನೇನು ಕೆಲವೇ ದಿನಗಳಲ್ಲಿ ಮಕ್ಕಳಿಗೆ ಶೂ, ಸಾಕ್ಸ್‌ ದೊರೆಯಲಿದೆ. ಹೀಗಾಗಿ ಈ ಬಾರಿ ಹೆಚ್ಚು ತಡವಾಗುವುದಿಲ್ಲ’ ಎಂದರು.

ಮೈಸೂರು ವಿಭಾಗದಲ್ಲಿ ಸಮವಸ್ತ್ರ ವಿಳಂಬ: ‘ಕಲಬುರ್ಗಿ, ಬೆಂಗಳೂರು ವಿಭಾಗಗಳಲ್ಲಿ ಶೇ 95ರಷ್ಟು ಶಾಲೆಗಳಲ್ಲಿ ಸಮವಸ್ತ್ರ ವಿತರಣೆಯಾಗಿದೆ. ಬೆಳಗಾವಿ ವಿಭಾಗದಲ್ಲಿನ ಚಿಕ್ಕೋಡಿ ಹಾಗೂ ಗದಗ ಶೈಕ್ಷಣಿಕ ಜಿಲ್ಲೆಗಳನ್ನು ಬಿಟ್ಟು ಉಳಿದ ಎಲ್ಲಾ ಕಡೆಗಳಲ್ಲಿ ಸಮವಸ್ತ್ರ ವಿತರಣೆ ಮಾಡಲಾಗುತ್ತಿದೆ‌’ ಎಂದು ಹೇಳಿದರು.

‘ಮೈಸೂರು ವಿಭಾಗದಲ್ಲಿ ಬರುವ ಜಿಲ್ಲೆಗಳಲ್ಲಿ ಸಮವಸ್ತ್ರ ವಿತರಿಸಲು ಟೆಂಡರ್‌ ಪ್ರಕ್ರಿಯೆ ನಡೆಸಬೇಕಾಗಿರುವುದರಿಂದ ಈ ಭಾಗದಲ್ಲಿ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ’ ಎಂದರು.

ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಪಠ್ಯಪುಸ್ತಕ ಮುದ್ರಣಕ್ಕೆ ಟೆಂಡರ್ ಕರೆದು ಕಾರ್ಯಾದೇಶ ನೀಡಿದ್ದರಿಂದ, ಶಾಲೆ ಪ್ರಾರಂಭದಲ್ಲಿಯೇ ಮಕ್ಕಳಿಗೆ ಪುಸ್ತಕಗಳು ಸಿಕ್ಕಿವೆ. ಚುನಾವಣೆ ನೀತಿ ಸಂಹಿತೆಯಿಂದಾಗಿ ಶೂ, ಸಾಕ್ಸ್‌ ಮತ್ತು ಸೈಕಲ್‌ ಖರೀದಿಯ ಪ್ರಕ್ರಿಯೆ ನಡೆದಿರಲಿಲ್ಲ.

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !