ಸಾಕ್ಷಿ ಹೇಳಿದ್ದಕ್ಕೆ ಜೀವ ಬೆದರಿಕೆ: ಆರೋಪಿ ಕಾಲಿಗೆ ಗುಂಡು

6
ಮಚ್ಚಿನಿಂದ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನ

ಸಾಕ್ಷಿ ಹೇಳಿದ್ದಕ್ಕೆ ಜೀವ ಬೆದರಿಕೆ: ಆರೋಪಿ ಕಾಲಿಗೆ ಗುಂಡು

Published:
Updated:
Deccan Herald

ಬೆಂಗಳೂರು: ತನ್ನ ವಿರುದ್ಧ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಿದ್ದಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ್ದ ರೌಡಿ ಜಾರ್ಜ್ ಕಾಲಿಗೆ ಸಿಸಿಬಿ ಪೊಲೀಸರು ಬುಧವಾರ ಗುಂಡು ಹೊಡೆದಿದ್ದಾರೆ.

ಚಾಮರಾಜಪೇಟೆಯ ಜಿಂಕೆ ಪಾರ್ಕ್ ಸಮೀಪ ರಾತ್ರಿ 9.15 ಗಂಟೆಗೆ ದಾಳಿ ನಡೆದಿದೆ. ಗಾಯಗೊಂಡ ಆರೋಪಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಾವರೆಕೆರೆಯ ಜಾರ್ಜ್‌, 2014ರಲ್ಲಿ ದಾಖಲಾಗಿದ್ದ ಅಪಹರಣ ಪ್ರಕರಣದಲ್ಲಿ ಸಾಕ್ಷಿದಾರರೊಬ್ಬರಿಗೆ ಕೊಲೆ ಬೆದರಿಕೆ ಹಾಕಿದ್ದ. ಈ ಪ್ರಕರಣದಲ್ಲಿ ಬಂಧಿಸಲು ಹೋಗಿದ್ದ ಪೊಲೀಸರಿಗೆ ಮಚ್ಚು ತೋರಿಸಿದಾಗ ಗುಂಡು ಹೊಡೆಯಲಾಗಿದೆ.

‘ಜಾರ್ಜ್‌ನ ಮೇಲೆ ಕೊಲೆ, ಅಪಹರಣ ಸೇರಿದಂತೆ ಒಟ್ಟು 11 ಪ್ರಕರಣಗಳಿವೆ. ಈ ಚಟುವಟಿಕೆಗಳ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಠಾಣೆಯಲ್ಲಿ ಆತನ ವಿರುದ್ಧ ರೌಡಿ ಪಟ್ಟಿ ತೆರೆಯಲಾಗಿತ್ತು’ ಎಂದು ಸಿಸಿಬಿ ಡಿಸಿಪಿ ಎಸ್.ಗಿರೀಶ್ ತಿಳಿಸಿದರು.

ಸಾಕ್ಷಿದಾರ ಮೋಹನ್ ಎಂಬುವವರಿಗೆ ಕರೆ ಮಾಡಿ, ನನ್ನ ವಿರುದ್ಧ ಸಾಕ್ಷಿ ಹೇಳಿರುವ ನಿನ್ನನ್ನು ಜೀವಂತ ಬಿಡುವುದಿಲ್ಲ ಎಂದು ಬೆದರಿಸಿದ್ದ. ಈ ಬಗ್ಗೆ ಚಾಮರಾಜಪೇಟೆ ಠಾಣೆಗೆ ಮೋಹನ್‌ ದೂರು ನೀಡಿದ್ದರು. ಬಳಿಕ ಸಿಸಿಬಿ ತನಿಖೆಗೆ ಪ್ರಕರಣ ವರ್ಗಗೊಂಡಿತು. ಇನ್‌ಸ್ಪೆಕ್ಟರ್‌ ಪ್ರಕಾಶ್ ನೇತೃ
ತ್ವದ ತಂಡ ಚಾಮರಾಜಪೇಟೆ ಬಳಿ ಇದ್ದ ಜಾರ್ಜ್ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿತು. ಜಿಂಕೆ ಪಾರ್ಕ್ ಬಳಿ ಸ್ಕೂಟಿಯಲ್ಲಿ ಬಂದ ಜಾರ್ಜ್‌ನನ್ನು ಅಡ್ಡಗಟ್ಟಿ ಬಂಧಿಸಲು ಪೊಲೀಸರು ಮುಂದಾದಾಗ ಮಚ್ಚಿನಿಂದ ಅವರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಆತ ಯತ್ನಿಸಿದ. ಈ ವೇಳೆ ಕಾನ್‌ಸ್ಟೆಬಲ್ ಉಮೇಶ್‌ ಅವರ ಕೈಗೆ ತೀವ್ರ ಪೆಟ್ಟಾಯಿತು.

‘ಆಗ ಇನ್‌ಸ್ಪೆಕ್ಟರ್ ಪ್ರಕಾಶ್, ಶರಣಾಗುವಂತೆ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದರು. ಇದಕ್ಕೆ ಆರೋಪಿ ಬಗ್ಗದಿದ್ದಾಗ ಆತನ ಕಾಲಿಗೆ ಗುಂಡು ಹೊಡೆದರು. ಕುಸಿದು ಬಿದ್ದ ಆರೋಪಿ ಮತ್ತು ಸಿಬ್ಬಂದಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು’ ಎಂದು ಡಿಸಿಪಿ ವಿವರಿಸಿದರು.

ಬರಹ ಇಷ್ಟವಾಯಿತೆ?

 • 12

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !