ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಗುಂಡು ಹಾರಿಸಿ ಬಾರ್ ಮಾಲೀಕನ ಹತ್ಯೆ

Last Updated 15 ಅಕ್ಟೋಬರ್ 2020, 17:27 IST
ಅಕ್ಷರ ಗಾತ್ರ

ಬೆಂಗಳೂರು: ಬ್ರಿಗೇಡ್ ರಸ್ತೆಗೆ ಹೊಂದಿಕೊಂಡಿರುವ ಆರ್‌.ಎಚ್‌.ಪಿ ರಸ್ತೆಯಲ್ಲಿರುವ ಡ್ಯೂಯೆಟ್ ಬಾರ್‌ ಮಾಲೀಕ ಮನೀಶ್ ಶೆಟ್ಟಿ (45) ಎಂಬುವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಗುಂಡೇಟಿನಿಂದ ಗಾಯಗೊಂಡಿದ್ದ ಮನೀಶ್ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ.

'ಚಿಕ್ಕಮಗಳೂರಿನ ಕೊಪ್ಪದ ಮನೀಶ್ ಶೆಟ್ಟಿ, ಕೆಲ ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಬಾರ್ ತೆರೆದಿದ್ದರು' ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್, ‘ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು, ಬಾರ್‌ ಮುಂಭಾಗದಲ್ಲೇ ಮನೀಶ್ ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಕಬ್ಬನ್ ಪಾರ್ಕ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಕೃತ್ಯಕ್ಕೆ ಕಾರಣವೇನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT