ಬೆಂಗಳೂರು: ಚಿಕ್ಕಪೇಟೆ ವಿಭಾಗದ ಗಾಂಧಿಬಜಾರ್ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದರು.

ಗಾಂಧಿಬಜಾರ್ನಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲವಾಗಲು ಸುಮಾರು 120 ಮಳಿಗೆಗಳಿಗೆ ಸ್ಥಳ ಗುರುತಿಸಿ, ಆ ಸ್ಥಳದಲ್ಲಿಯೇ ವ್ಯಾಪಾರ ಮಾಡಲು ಸೂಚನೆ ನೀಡಲಾಗಿತ್ತು. ಆದರೆ ನಿಗದಿಪಡಿಸಿರುವ ಸ್ಥಳ ಬಿಟ್ಟು ಬೇರೆ ಜಾಗದಲ್ಲಿ ವ್ಯಾಪಾರ ಮಾಡುತ್ತಿದ್ದು, ಇದರಿಂದ ಪಾದಚಾರಿಗಳಿಗೆ ಸಾಕಷ್ಟು ಸಮಸ್ಯೆ ಆಗುತ್ತಿದೆ ಎಂದು ಚಿಕ್ಕಪೇಟೆ ಕಾರ್ಯಪಾಲಕ ಎಂಜಿನಿಯರ್ ಪ್ರದೀಪ್ ಕುಮಾರ್ ಹೇಳಿದರು.

ಒತ್ತುವರಿ ತೆರವುಗೊಳಿಸಲು ಸಾಕಷ್ಟು ಬಾರಿ ತಿಳಿಸಿದ್ದರೂ ತೆರವುಗೊಳಿಸಿರಲಿಲ್ಲ. ಮಂಗಳವಾರ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವುಗೊಳಿಸಲಾಯಿತು. ಎರಡು ಜೆಸಿಬಿ, ಏಳು ಟ್ರ್ಯಾಕ್ಟರ್, ಮೂರು ಲಾರಿ ಹಾಗೂ 40 ಸಿಬ್ಬಂದಿ ಕಾರ್ಯನಿರ್ವಹಿಸಿದ್ದು, ಐದು ಅಂಗಡಿಗಳನ್ನು ತೆರವುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬೀದಿ ಬದಿ ವ್ಯಾಪಾರಿಗಳು ಅವರಿಗೆ ನಿಗದಿಪಡಿಸಿರುವ ಜಾಗದಲ್ಲಿಯೇ ವ್ಯಾಪಾರ ಮಾಡಬೇಕು. ಅದನ್ನು ಹೊರತುಪಡಿಸಿ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.