ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಷ್ಟ್ರೀಯ ಇನ್‌ಸ್ಪೈರ್ ಅವಾರ್ಡ್ ಸ್ಪರ್ಧೆಗೆ ವಿದ್ಯಾರ್ಥಿನಿ ಐಶ್ವರ್ಯಾ ಆಯ್ಕೆ

Published 1 ಜುಲೈ 2024, 15:54 IST
Last Updated 1 ಜುಲೈ 2024, 15:54 IST
ಅಕ್ಷರ ಗಾತ್ರ

ಹೆಸರಘಟ್ಟ; ಇನ್‌ಸ್ಪೈರ್ ಅವಾರ್ಡ್ ಕಾರ್ಯಕ್ರಮದಡಿ ಮಂಗಳೂರು ಸುರತ್ಕಲ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿಯಲ್ಲಿ (ಎನ್‌ಐಟಿ–ಕೆ) ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಹೆಸರಘಟ್ಟ ಹೋಬಳಿ ಕಾಕೋಳು ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಐಶ್ವರ್ಯಾ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಪ್ರತಿಭಾವಂತ ಮಕ್ಕಳನ್ನು ಗುರುತಿಸಲು ಕೇಂದ್ರ ಸರ್ಕಾರವು ಇನ್‌ಸ್ಪೈರ್ ಅವಾರ್ಡ್ ನೀಡುತ್ತಿದೆ. ನ್ಯಾಷನಲ್ ಇನ್ನೋವೇಷನ್ ಫೌಂಡೇಶನ್ ವತಿಯಿಂದ ಜುಲೈ 9 ಮತ್ತು 10ರಂದು  ಸ್ಪರ್ಧೆ ನಡೆಯಲಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ 39 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT