ಕ್ರಿಯಾ ಯೋಜನೆಗೆ ತ್ವರಿತ ಅನುಮೋದನೆ: ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು

ಬೆಂಗಳೂರು: ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಎಸ್ಪಿ) ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯ (ಟಿಎಸ್ಪಿ) ಕ್ರಿಯಾ ಯೋಜನೆಗೆ ತ್ವರಿತವಾಗಿ ರಾಜ್ಯ ಪರಿಷತ್ನ ಅನುಮೋದನೆ ಪಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.
ಕ್ರಿಯಾ ಯೋಜನೆ ಅನುಮೋದನೆ ವಿಳಂಬದಿಂದ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುಷ್ಠಾನಕ್ಕೆ ಅಡ್ಡಿಯಾಗಿರುವ ಕುರಿತು ‘ಪ್ರಜಾವಾಣಿ’ಯ ಶನಿವಾರದ ಸಂಚಿಕೆಯಲ್ಲಿ ‘₹26 ಸಾವಿರ ಕೋಟಿ ಬಳಕೆಗೆ ಅಡ್ಡಿ’ ಶೀರ್ಷಿಕೆಯಲ್ಲಿ ಪ್ರಕಟವಾದ ವಿಶೇಷ ವರದಿಗೆ ಪ್ರತಿಕ್ರಿಯಿಸಿರುವ ಅವರು, ‘ವರ್ಚುವಲ್ ಆಗಿ ರಾಜ್ಯ ಪರಿಷತ್ ಸಭೆ ನಡೆಸುವುದು ಅಥವಾ ಕೋವಿಡ್ ಕಾರಣದಿಂದ ನೇರವಾಗಿ ಮುಖ್ಯಮಂತ್ರಿಯವರ ಮೂಲಕ ಒಪ್ಪಿಗೆ ಪಡೆದು ಈ ಅನುದಾನದ ಬಳಕೆಗೆ ಅವಕಾಶ ಕಲ್ಪಿಸಲು ಪ್ರಯತ್ನ ನಡೆಯುತ್ತಿದೆ’ ಎಂದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.