ಸೋಮವಾರ, ಮಾರ್ಚ್ 30, 2020
19 °C

ಪೊಲೀಸ್ ಕಾನ್‌ಸ್ಟೆಬಲ್ ಮೇಲೆ ಮತ್ತೊಮ್ಮೆ ಹಲ್ಲೆ ನಡೆಸಿದ ಆರೋಪಿಯ ಕಾಲಿಗೆ ಗುಂಡೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಂಜಯನಗರದಲ್ಲಿ ಬುಧವಾರ ಪೊಲೀಸ್ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ಒಂದನೇ ಆರೋಪಿಯ ಕಾಲಿಗೆ ಪೊಲೀಸರು ಗುರುವಾರ ನಸುಕಿನಲ್ಲಿ ಗುಂಡು ಹೊಡೆದಿದ್ದಾರೆ.

ಆರೋಪಿ ತಾಜುದ್ದೀನ್‌ನನ್ನು ಗುರುವಾರ ನಸುಕಿನಲ್ಲಿ ಘಟನಾ ಸ್ಥಳಕ್ಕೆ ಕರೆದೊಯ್ದು ಮಹಜರು ನಡೆಸುವ ವೇಳೆ ಆತ ಪರಾರಿಯಾಗಲು ಯತ್ನಿಸಿದ. ಸ್ವಲ್ಪ ದೂರ ಓಡಿದ ಆರೋಪಿಯನ್ನು ಬಂಧಿಸಲು ಹೋದ ಪೊಲೀಸರ ಮೇಲೆ, ಆತ ಕಲ್ಲು ಮತ್ತು ಇಟ್ಟಿಗೆ  ತುಂಡುಗಳನ್ನು ಎಸೆದಿದ್ದಾನೆ.

ಈ ವೇಳೆ ಪಿಎಸ್ಐ ರೂಪಾ ಮತ್ತು ಹೆಡ್ ಕಾನ್‌ಸ್ಟೆಬಲ್ ಮಂಜಣ್ಞ ಅವರ ಮೇಲೆ ಆರೋಪಿ ಹಲ್ಲೆ ನಡೆಸಿದ್ದಾನೆ.

ತಕ್ಷಣ ಸಂಜಯನಗರ ಇನ್‌ಸ್ಪೆಕ್ಟರ್ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಆದರೂ  ಆರೋಪಿ ಶರಣಾಗದಿದ್ದಾಗ ಎಡಗಾಲಿಗೆ ಗುಂಡು ಹೊಡೆದಿದ್ದಾರೆ.

ಗಾಯಗೊಂಡಿರುವ ಆರೋಪಿ ಮತ್ತು ಪೊಲೀಸ್ ಅಧಿಕಾರಿಗಳನ್ನು ಬಾಪ್ಟಿಸ್ಸ್ ಆಸ್ಪತ್ರೆ ಗೆ ದಾಖಲಿಸಲಾಗಿದೆ ಎಂದು ಉತ್ತರ ವಲಯ ಡಿಸಿಪಿ ಶಶಿಕುಮಾರ್ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು