ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅ.1ಕ್ಕೆ ಶೂದ್ರ, ದಲಿತರ ಸಮಾವೇಶ

Published : 20 ಸೆಪ್ಟೆಂಬರ್ 2024, 15:34 IST
Last Updated : 20 ಸೆಪ್ಟೆಂಬರ್ 2024, 15:34 IST
ಫಾಲೋ ಮಾಡಿ
Comments

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರು ಒಕ್ಕಲಿಗ ಮತ್ತು ಹೊಲೆಯ ಸಮುದಾಯಗಳನ್ನು ಹೀನಾಯವಾಗಿ ನಿಂದಿಸಿರುವುದನ್ನು ಖಂಡಿಸಿ ಅ.1ರಂದು ಶೂದ್ರ, ದಲಿತರ ಬೃಹತ್‌ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಮಾವೇಶ ಕುರಿತು ಶುಕ್ರವಾರ ಸಭೆ ನಡೆಸಿದ ಸಮುದಾಯಗಳ ಮುಖಂಡರು, ಸಾಹಿತಿಗಳು, ಚಿಂತಕರು, ಹೋರಾಟಗಾರರು ಮತ್ತು ವಿದ್ಯಾರ್ಥಿ ಮುಖಂಡರು ಈ ತೀರ್ಮಾನ ಮಾಡಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಂದ ಆಯ್ಕೆಯಾದ ಜನಪ್ರತಿನಿಧಿಯೊಬ್ಬರು ಈ ರೀತಿ ಜಾತಿ ವಿರೋಧಿ ಹೇಳಿಕೆಗಳನ್ನು ಕೊಡುವುದು ಸಂವಿಧಾನ ವಿರೋಧಿ ಮತ್ತು ಕಾನೂನು ಬಾಹಿರವಾಗಿರುತ್ತದೆ‌. ಈ ಹೇಳಿಕೆಗಳಿಂದ ಒಕ್ಕಲಿಗ ಮತ್ತು ದಲಿತ ಸಮುದಾಯಗಳ ಭಾವನೆಗಳಿಗೆ ಘಾಸಿಯುಂಟಾಗಿದೆ. ಇದನ್ನು ಖಂಡಿಸಿ ಸಮಾವೇಶ ನಡೆಸಲಾಗುವುದು ಎಂದು ಮುಖಂಡರು ತಿಳಿಸಿದ್ದಾರೆ. 

ಸಭೆಯಲ್ಲಿ ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ನಟ ಶ್ರೀನಗರ ಕಿಟ್ಟಿ, ಬಿ. ಗೋಪಾಲ್, ಬಸವರಾಜ್ ಕೌತಾಳ್, ಹೆಣ್ಣೂರ್ ಶ್ರೀನಿವಾಸ್, ಒಕ್ಕಲಿಗ ಸಂಘದ ಹನುಮಂತರಾಯಪ್ಪ, ಚಂದ್ರು ಪೆರಿಯಾರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT