ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶಿವಕುಮಾರ ಶ್ರೀಗಳ ಸಾಮಾಜಿಕ ಸೇವೆ ಸ್ಮರಣೀಯ’

Last Updated 7 ಏಪ್ರಿಲ್ 2022, 20:17 IST
ಅಕ್ಷರ ಗಾತ್ರ

ಬೆಂಗಳೂರು: ‘ಮಠ ಮಾನ್ಯಗಳು‌‌ ಯಾವ ರೀತಿ ಸಾಮಾಜಿಕ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎನ್ನುವುದನ್ನು ದೇಶಕ್ಕೆ ತಿಳಿಸಿಕೊಟ್ಟ‌ ಶ್ರೇಯಸ್ಸು ಸಿದ್ಧಗಂಗಾದ ಡಾ.ಶಿವಕುಮಾರ ಸ್ವಾಮೀಜಿಗೆ ಸಲ್ಲುತ್ತದೆ’ ಎಂದು ಸಚಿವ ಕೆ.ಗೋಪಾಲಯ್ಯ ಹೇಳಿದರು.

ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ ವೀರಶೈವ ಲಿಂಗಾಯತ ಸಂಘದಿಂದ ಗುರುವಾರ ಹಮ್ಮಿಕೊಂಡಿದ್ದ ಶಿವಕುಮಾರ ಸ್ವಾಮೀಜಿ ಅವರ 115ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಶ್ರೀಗಳ‌ ಭಾವಚಿತ್ರಕ್ಕೆ ಪುಷ್ಪ‌ನಮನ ಸಲ್ಲಿಸುವ ಮೂಲಕ ಚಾಲನೆ ನೀಡಿ‌ ಅವರು ಮಾತನಾಡಿದರು.

ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದಲ್ಲಿ ‌ವಿಶ್ವಗುರು ಬಸವಣ್ಣ, ಬಾಲಗಂಗಾಧರನಾಥ ಸ್ವಾಮೀಜಿ, ಶಿವಕುಮಾರ ಶ್ರೀ ಗಳ ಸ್ಮರಣಾರ್ಥ ನಿರ್ಮಾಣ ಮಾಡಿರುವ ಪಾರ್ಕ್ ಮತ್ತು ಕಂಚಿನ ಪ್ರತಿಮೆಗಳನ್ನು ಶೀಘ್ರ ಉದ್ಘಾಟಿಸಲಾಗುವುದು ಎಂದರು.

ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ, ಮಾಜಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ, ಬಿಜೆಪಿ ಮುಖಂಡ ಎಸ್. ಹರೀಶ್, ಶ್ರೀನಿವಾಸ್, ವೀರಶೈವ ಲಿಂಗಾಯತ ಸಂಘದ ಅಧ್ಯಕ್ಷ ಅವಿನ್ ಆರಾಧ್ಯ, ಪಿನಾಕ ಪಾಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT