ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮುಖ್ಯಮಂತ್ರಿ’ ಚಂದ್ರುಗೆ ಸಿದ್ಧಗಂಗಾ ಸಿರಿ ಪ್ರಶಸ್ತಿ

Last Updated 27 ಮಾರ್ಚ್ 2021, 19:37 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ನೀಡಲಾಗುವ ‘ಸಿದ್ಧಗಂಗಾ ಸಿರಿ’ ಪ್ರಶಸ್ತಿಗೆ ಹಿರಿಯ ನಟ ‘ಮುಖ್ಯಮಂತ್ರಿ’ ಚಂದ್ರು ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ₹10 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ.

ಅನ್ನಪೂರ್ಣೇಶ್ವರಿ ನಗರದ ಪೂರ್ಣಚಂದ್ರ ರಂಗಮಂದಿರದಲ್ಲಿ ಏಪ್ರಿಲ್ 1ರಂದು ಸಂಜೆ 5.30ಕ್ಕೆ ನಡೆಯಲಿರುವ ಶಿವಕುಮಾರ ಸ್ವಾಮೀಜಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಕಾರ್ಯಕ್ರಮದಲ್ಲಿ ಶಿವಗಂಗೆಯ ಮೇಲಗಣವಿ ಮಠದ ಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಾಹಿತಿ ಗೊ.ರು.ಚನ್ನಬಸಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT