ಸೋಮವಾರ, 4 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇಣುಕಾಚಾರ್ಯರು, ಬಸವೇಶ್ವರ, ಸಿದ್ಧಗಂಗಾ ಶ್ರೀ ಜಯಂತಿ ಆಚರಣೆ

Last Updated 30 ಮೇ 2022, 19:55 IST
ಅಕ್ಷರ ಗಾತ್ರ

ಯಲಹಂಕ: ಅನೇಕ ದಾರ್ಶನಿಕರು, ಚಿಂತಕರು ಹಾಗೂ ಸಮಾಜ ಸುಧಾರಕರು ಈ ನಾಡಿನ ಧಾರ್ಮಿಕ ಪರಂಪರೆಯನ್ನು ವಿಶ್ವಮಟ್ಟದಲ್ಲಿ ಶ್ರೀಮಂತಗೊಳಿಸಿದ್ದಾರೆ ಎಂದು ಶಾಸಕ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಅಖಿಲ ಭಾರತ ವೀರಶೈವ ಮಹಾಸಭಾದ ಯಲಹಂಕ ವಿಧಾನಸಭಾ ಕ್ಷೇತ್ರ ಘಟಕ ಉಪನಗರ 5ನೇ ಹಂತದ ನಿಸರ್ಗ ಮೈದಾನದಲ್ಲಿ ಆಯೋಜಿಸಿದ್ದ ಜಗದ್ಗುರು ರೇಣುಕಾಚಾರ್ಯರ ಯುಗಮಾನೋತ್ಸವ, ಬಸವೇಶ್ವರರ ಜಯಂತ್ಯೋತ್ಸವ ಹಾಗೂ ಸಿದ್ಧಗಂಗಾದ ಶಿವಕುಮಾರಸ್ವಾಮಿಗಳ 115ನೇ ಜಯಂತ್ಯೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

12ನೇ ಶತಮಾನದಲ್ಲಿ ಬಸವಣ್ಣನವರು ವಚನ ಸಾಹಿತ್ಯದ ಮೂಲಕ ಜಾತಿ-ಮತ ಭೇದವಿಲ್ಲದೆ ಸಮಾನತೆಯ ಪರಿಕಲ್ಪನೆ ಅನುಷ್ಠಾನಗೊಳಿಸಿದ್ದರು. ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದ ರೇಣುಕಾಚಾರ್ಯರು 3 ಸಾವಿರಕ್ಕೂ ಹೆಚ್ಚು ಮಠಗಳನ್ನು ಸ್ಥಾಪಿಸಿ ವೀರಶೈವ ಸಮುದಾಯದ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ’ ಎಂದರು.

ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ‘ಬಸವಣ್ಣನವರ ನೆನಪು ನಮ್ಮೆಲ್ಲರಲ್ಲೂ ಶಾಶ್ವತವಾಗಿ ಉಳಿಯಬೇಕು. ಸೋಮೇಶ್ವರ ದೇವಸ್ಥಾನದ ಬಳಿ ಈಗಾಗಲೆ ಬಸವಭವನ ಹಾಗೂ ಸಮುದಾಯಭವನ ನಿರ್ಮಿಸಿ ಲೋಕಾರ್ಪಣೆ ಮಾಡಲಾಗಿದೆ. ಯಲಹಂಕದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಬಸವಣ್ಣನವರ 6 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಶೀಘ್ರದಲ್ಲೇ ಸ್ಥಾಪಿಸಲಾಗುವುದು’ ಎಂದು ತಿಳಿಸಿದರು.

ಇದಕ್ಕೂ ಮುನ್ನ ರೇಣುಕಾಚಾರ್ಯರು, ಬಸವೇಶ್ವರರು ಹಾಗೂ ಶಿವಕುಮಾರಸ್ವಾಮಿಗಳ ಭಾವಚಿತ್ರವನ್ನು ರಥದಲ್ಲಿ ಇರಿಸಿ ಹಳೇನಗರದ ಮಹಾಸಭಾ ಕಚೇರಿಯಿಂದ ಮೆರವಣಿಗೆ ನಡೆಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT