ಬುಧವಾರ, ಜನವರಿ 29, 2020
31 °C

ಕಾಂಗ್ರೆಸ್ ಮುಖಂಡನ ಕೊಲೆಗೆ ಯತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಿದ್ದಾಪುರ ಠಾಣೆ ವ್ಯಾಪ್ತಿಯ ಸೋಮೇಶ್ವರ ನಗರದಲ್ಲಿ ಕಾಂಗ್ರೆಸ್ ಮುಖಂಡ ಸೈಯದ್ ರಿಯಾಜ್ (37) ಎಂಬುವರ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾರೆ.

‘ಸೋಮವಾರ ಮಧ್ಯಾಹ್ನ 3.50ರ ಸುಮಾರಿಗೆ ಈ ಘಟನೆ ನಡೆದಿದೆ. ತೀವ್ರ ಗಾಯಗೊಂಡಿರುವ ರಿಯಾಜ್ ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

‘ಸರ್ಕಾರೇತರ ಸಂಸ್ಥೆಯೊಂದನ್ನು ನಡೆಸುತ್ತಿದ್ದ ರಿಯಾಜ್‌ ಮನೆಗೆ ಬೈಕ್‌ನಲ್ಲಿ ಊಟಕ್ಕೆಂದು ಹೋಗಿದ್ದರು. ಮನೆ ಮುಂದೆ ಬೈಕ್‌ ನಿಲ್ಲಿಸುತ್ತಿದ್ದಂತೆ, ಎರಡು ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ಅವರನ್ನು ಸುತ್ತುವರಿದು ತಲೆಗೆ ಹೊಡೆದರು. ಕಿರುಚಾಟ ಕೇಳಿ ಸ್ಥಳೀಯರು ಸಹಾಯಕ್ಕೆ ಬರುವಷ್ಟರಲ್ಲೇ ಆರೋಪಿಗಳು ಪರಾರಿಯಾದರು.’

‘ಆರೋಪಿಗಳು ಹೆಲ್ಮೆಟ್‌ ಧರಿಸಿಕೊಂಡು ಬಂದು ಕೃತ್ಯ ಎಸಗಿದ್ದಾರೆ. ರಿಯಾಜ್ ಹೇಳಿಕೆ ಆಧರಿಸಿ ಕೊಲೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು