ಬೆಂಗಳೂರು: ‘ಕೆ.ಜಿ.ಹಳ್ಳಿ, ಡಿ.ಜೆ. ಹಳ್ಳಿ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸವನ್ನು ರಾಜ್ಯ ಬಿಜೆಪಿ ಸರ್ಕಾರ ಯೋಜಿತ ರೀತಿಯಲ್ಲಿ ಮಾಡುತ್ತಿದೆ. ದಿನಕ್ಕೊಬ್ಬ ಸಚಿವರು, ಶಾಸಕರು ಭೇಟಿ ನೀಡಿ, ಗಲಭೆಗೆ ಎಸ್‌ಡಿಪಿಐ, ಕಾಂಗ್ರೆಸ್, ಭಯೋತ್ಪಾದಕರು ಕಾರಣ ಎಂದು ನೀಡುತ್ತಿರುವ ತರಹೇವಾರಿ ಹೇಳಿಕೆಗಳೇ ಇದಕ್ಕೆ ಸಾಕ್ಷಿ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ‘ಎಸ್‌ಡಿಪಿಐ ನಾಯಕರು ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಿ, ಸಂಘಟನೆ ತಪ್ಪು ಮಾಡಿದ್ದರೆ ಕ್ರಮಕೈಗೊಳ್ಳಿ. ಮುಸ್ಲಿಂ ಮತಗಳನ್ನು ಒಡೆಯಲು ಎಸ್‌ಡಿಪಿಐ ಅನ್ನು ಯೋಜಿತ ರೀತಿಯಲ್ಲಿ ಬಳಸಿಕೊಳ್ಳುತ್ತಲೇ ಬಂದಿರುವ ಬಿಜೆಪಿಗೆ ಅದನ್ನು ನಿಷೇಧಿಸುವ ಧೈರ್ಯ ಇದೆಯೇ’ ಎಂದೂ ಪ್ರಶ್ನಿಸಿದ್ದಾರೆ.

‘ಅಪರಾಧಿಗಳನ್ನು ಪತ್ತೆ ಹಚ್ಚುವುದಕ್ಕಿಂತಲೂ ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಿಲುಕಿಸುವುದು ಹೇಗೆ, ಕೋಮುಗಲಭೆ ಎಂದು ಬಣ್ಣಿಸಿ ರಾಜಕೀಯ ಲಾಭ ಗಳಿಸುವುದು ಹೇಗೆ ಎನ್ನುವ ಬಗ್ಗೆ ಬಿಜೆಪಿ ನಾಯಕರು ತಲೆಕೆಡಿಸಿಕೊಂಡಿದ್ದಾರೆ’ ಎಂದೂ ಟೀಕಿಸಿದ್ದಾರೆ.

‘ರಾಜ್ಯ ಬಿಜೆಪಿ ಸ್ಪಷ್ಟವಾಗಿ ಎರಡು ಗುಂಪಾಗಿ ಒಡೆದಿದೆ. ಯಡಿಯೂರಪ್ಪ ಅವರ ಪದಚ್ಯುತಿಗೆ ಕೆಲವು ಆರ್‌ಎಸ್ಎಸ್ ಸಮೀಪವರ್ತಿ ನಾಯಕರು ನಡೆಸುತ್ತಿರುವ ಪ್ರಯತ್ನಕ್ಕೆ ಈ ಪ್ರಕರಣವನ್ನು ಯಥೇಚ್ಛವಾಗಿ ಬಳಸಲಾಗುತ್ತಿದೆ’ ಎಂದೂ ಹೇಳಿದ್ದಾರೆ.

‘ನಮ್ಮದೇ ಪಕ್ಷದ ಶಾಸಕ ಮತ್ತು ಕಾರ್ಪೊರೇಟರ್‌ಗಳು ಇರುವಾಗ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇರುವ ಆಸಕ್ತಿಯಾದರು ಏನು. ಅಲ್ಲಿ ಚುನಾವಣೆಯಲ್ಲಿ ಎದುರಿಸಲಾಗದ ರಾಜಕೀಯ ಪಕ್ಷಗಳೇ ರಾಜಕೀಯ ಲಾಭ ಪಡೆಯಲು ಹೊರಟಿರುವುದು ಸ್ಪಷ್ಟ’ ಎಂದಿದ್ದಾರೆ.

‘ಗಲಭೆಯ ತನಿಖೆ, ಬಿಜೆಪಿ ನೇತೃತ್ವದ ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯದಿಂದ ಆರಂಭವಾಗಬೇಕು. ಸರ್ಕಾರದ ಪ್ರಕಾರ ಇದು ಪೂರ್ವಯೋಜಿತ ಕೃತ್ಯವಾಗಿದ್ದರೆ, ಏಕೆ ಪೊಲೀಸರ ಗಮನಕ್ಕೆ ಬಂದಿಲ್ಲ, ಪ್ರಚೋದನಕಾರಿ ಪೋಸ್ಟ್ ಹಾಕಿರುವ ನವೀನ್ ವಿರುದ್ಧ ಪ್ರಕರಣ ದಾಖಲಿಸಲು ವಿಳಂಬಕ್ಕೆ ಯಾರು ಕಾರಣ’ ಎಂದೂ ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.